ಕರ್ನಾಟಕ

karnataka

ETV Bharat / city

ಪ್ರಶ್ನೆ ಪತ್ರಿಕೆ ಸೋರಿಕೆ; 6 ಮಂದಿ ಬಂಧನ, ನಾಳೆ ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಮುಂದೂಡಿಕೆ - ನಾಳೆ ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಮುಂದೂಡಿಕೆ

FDA Exam postponed
ಪ್ರಶ್ನೆ ಪತ್ರಿಕೆ ಸೋರಿಕೆ; 6 ಮಂದಿ ಬಂಧನ, ನಾಳೆ ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಮುಂದೂಡಿಕೆ

By

Published : Jan 23, 2021, 8:16 PM IST

Updated : Jan 23, 2021, 10:00 PM IST

20:11 January 23

2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ)ರ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. ಬೆಂಗಳೂರಿನ ಸಿಸಿಬಿ ಪೊಲೀಸರು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ; 6 ಮಂದಿ ಬಂಧನ, ನಾಳೆ ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. 

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಇಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗಿತ್ತು. ನಾಳೆ ಎರಡು ಅವಧಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು.

ಆದರೆ ಕೆಲ ದುಷ್ಕರ್ಮಿಗಳು ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ನಾಳೆ ನಡೆಯಬೇಕಾಗಿದ್ದ ಎಫ್‌ಡಿಎ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ‌ ಸಂಬಂಧ ಲೋಕಾಸೇವಾ ಆಯೋಗ ಪ್ರಕಟಣೆ ಹೊರಡಿಸಿದ್ದು, ನಾಳೆ ನಡೆಯಬೇಕಾಗಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ತಿಳಿಸಿದೆ.

ಈ ಸಂಬಂಧ ಸಿ.ಸಿ.ಬಿ ಪೊಲೀಸರು ಚಂದ್ರು, ರಾಚಪ್ಪ ಎಂಬುವರು ಸೇರಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಜೊತೆಗೆ 24 ಲಕ್ಷ ರೂ. ನಗದು ಮತ್ತು 3 ವಾಹನಗಳನ್ನು ಈಗಾಗಲೇ ಆರೋಪಿಗಳಿಂದ ಜಪ್ತಿ ಮಾಡಲಾಗಿದ್ದು. ಇನ್ನೂ ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ ಪಾಟೀಲ ಟ್ವೀಟ್ ಮಾಡಿದ್ದಾರೆ. 

ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಿಸಿಬಿ ಪೊಲೀಸರು ಲೋಕಸೇವಾ ಆಯೋಗಕ್ಕೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

Last Updated : Jan 23, 2021, 10:00 PM IST

ABOUT THE AUTHOR

...view details