ಬೆಂಗಳೂರು :ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸತತ 3 ಬಾರಿ ಗೆಲುವು ಸಾಧಿಸಿದ್ದ ವಿ.ಸುನಿಲ್‌ಕುಮಾರ್ ಅವರಿಗೆ ಸಚಿವ ಪಟ್ಟ ಒಲಿದು ಬಂದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಸುನಿಲ್ ಕುಮಾರ್ಗೆ ಅವಕಾಶ ಲಭಿಸಿದೆ. ಬಿಲ್ಲವ ಸಮುದಾಯದ ಪ್ರತಿನಿಧಿ 45 ವರ್ಷದ ಬಿಎ ಪದವೀಧರರಾದ ಅವರು ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಸುನಿಲ್ ಕುಮಾರ್ 2004, 2013 ಹಾಗೂ 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಅಭ್ಯರ್ಥಿ ಗೋಪಾಲ್ ಭಂಡಾರಿ ವಿರುದ್ಧ ಸತತ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಹಿಂದೆ ಬಿ ಎಸ್ ಯಡಿಯೂರಪ್ಪ ಸಂಪುಟದಲ್ಲಿ ಇವರಿಗೆ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಮೊದಲ ಬಾರಿಗೆ ಸಚಿವರಾದ ಅನುಭವ ಹೊಂದಿದ್ದಾರೆ.
ಸರ್ಕಾರದ ಮುಖ್ಯ ಸಚೇತಕರಾಗಿ ಹಾಗೂ ಕೇರಳದ ಬಿಜೆಪಿ ಸಹ ಉಸ್ತುವಾರಿಯಾಗಿ ಕೆಲಸ ಮಾಡಿರುವ ಇವರು, ವೃತ್ತಿಯಲ್ಲಿ ವ್ಯಾಪಾರ ಹಾಗೂ ಕೃಷಿಕರಾಗಿದ್ದಾರೆ. ಈವರೆಗೂ ಕೋಟ ಶ್ರೀನಿವಾಸ್ ಪೂಜಾರಿ ಸಚಿವರಾಗಿದ್ದ ಹಿನ್ನೆಲೆ ಅವರಿಗೆ ಸಚಿವ ಸ್ಥಾನ ಕೈತಪ್ಪಲಿದೆ ಎನ್ನಲಾಗುತ್ತಿತ್ತು. ಆದರೆ, ಈ ಬಾರಿ ಉಡುಪಿ ಜಿಲ್ಲೆ ಜೊತೆ ಸುನಿಲ್ ಕುಮಾರ್ ಸೇರ್ಪಡೆಯಾಗಿದ್ದು, ಡಬಲ್ ಧಮಾಕಾ ದೊರಕಿದೆ.