ಬೆಂಗಳೂರು:ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನವನ್ನು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಖಂಡಿಸಿದ್ದಾರೆ. ಆಕೆಯನ್ನು ಬಿಡುಗಡೆ ಮಾಡದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ರವಾನಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರೈತರ ಪ್ರತಿಭಟನೆಗೆ ಬೆಂಬಲಿಸಿದ ದಿಶಾ ರವಿಯನ್ನು ಬಂಧಿಸಲಾಗಿದೆ. ಸರ್ಕಾರದ ವಿರುದ್ಧ ಮಾತನಾಡಿದವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ಕಾನೂನು ಬಾಹಿರವಾಗಿ ದೆಹಲಿ ಪೊಲೀಸರು ಕರ್ನಾಟಕದ ಯುವತಿಯನ್ನು ಬಂಧಿಸಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ತಕ್ಷಣ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.