ಬೆಂಗಳೂರು:2019ನೇ ಸಾಲಿನ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಸಮಯದಲ್ಲಿ ಮೈತ್ರಿ ಸರ್ಕಾರದ ಮುಖಂಡರು ಆದಾಯ ತೆರಿಗೆ ಇಲಾಖೆ ಬಳಿ ಪ್ರತಿಭಟನೆ ಮಾಡಿದ್ದರು. ಈ ಕುರಿತು ಎ.ಮಲ್ಲಿಕಾರ್ಜುನ ದೂರು ದಾಖಲಿಸಿದ್ದು, ಹಿಂದಿನ ಮೈತ್ರಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಮೇಲೆ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿದ್ದನ್ನ ಖಂಡಿಸಿ ಹಿಂದಿನ ಮೈತ್ರಿ ನಾಯಕರು ಪ್ರತಿಭಟನೆ ನಡೆಸಿದ್ದರು. ಆದರೆ ಪೊಲೀಸರು ಎಫ್ಐಆರ್ ದಾಖಲಿಸದೇ ಇರುವ ಹಿನ್ನೆಲೆ ಎ.ಮಲ್ಲಿಕಾರ್ಜುನ ಎಂಬುವವರು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಲ್ಲಿ ದೂರು ದಾಖಲಿಸಿದ್ರು. ಸದ್ಯ ನ್ಯಾಯಾಲಯದ ಆದೇಶದ ಮೇರೆಗೆ ಹಿಂದಿನ ಮೈತ್ರಿ ಸರ್ಕಾರದ ಮುಖಂಡರಾದ ಮಾಜಿ ಸಿಎಂ ಹೆಚ್‌ಡಿಕೆ, ಡಾ. ಜಿ.ಪರಮೇಶ್ವರ್, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಡಿ.ಕೆ.ಶಿವಕುಮಾರ್, ಸಾ.ರಾ. ಮಹೇಶ್, ಡಿ.ಸಿ.ತಮ್ಮಣ್ಣ, ಮುನಿರತ್ನ ನಾಯ್ಡು ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.