ಕರ್ನಾಟಕ

karnataka

By

Published : May 25, 2021, 9:17 AM IST

ETV Bharat / city

ಚಿತ್ರೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿಎಂಗೆ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಮನವಿ

ಕೋವಿಡ್ ಲಾಕ್​ಡೌನ್​ನಿಂದ ಕನ್ನಡ ಚಿತ್ರೋದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರರಂಗದ ಸಾವಿರಾರು ಕಾರ್ಮಿಕರು ದಿನಗೂಲಿ ಮಾಡಿ ಜೀವನ ನಡೆಸುತ್ತಿದ್ದರು. ಇಂದು ಅವರು ಬೀದಿಗೆ ಬೀಳುವಂತಾಗಿದೆ. ಆದ್ದರಿಂದ ತಕ್ಷಣವೇ ಚಿತ್ರೋದ್ಯಮದ ನೆರವಿಗೆ ವಿಶೇಷ ಪ್ಯಾಕೇಜ್ ನೀಡಿ ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಸಿಎಂಗೆ ಮನವಿ ಸಲ್ಲಿಸಿದ್ದಾರೆ.

Bangalore
ಸಿಎಂಗೆ ಚಲನಚಿತ್ರ ಅಕಾಡಮಿ ಅಧ್ಯಕ್ಷರ ಮನವಿ

ಬೆಂಗಳೂರು: ಕೋವಿಡ್ ಲಾಕ್​ಡೌನ್​ನಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮನವಿ ಸಲ್ಲಿಸಿದ್ದಾರೆ.

ಸಿಎಂಗೆ ಚಲನಚಿತ್ರ ಅಕಾಡಮಿ ಅಧ್ಯಕ್ಷರ ಮನವಿ

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಸುನೀಲ್ ಪುರಾಣಿಕ್, ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚಿತ್ರರಂಗದ ಕುರಿತು ಮಾತುಕತೆ ನಡೆಸಿ ಕಲಾವಿದರಿಗೆ ನೆರವಾಗುವಂತೆ ಮನವಿ ಸಲ್ಲಿಸಿದರು.

ಕೋವಿಡ್ ಲಾಕ್​ಡೌನ್​ನಿಂದ ಕನ್ನಡ ಚಿತ್ರೋದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರರಂಗದ ಸಾವಿರಾರು ಕಾರ್ಮಿಕರು ದಿನಗೂಲಿ ಮಾಡಿ ಜೀವನ ನಡೆಸುತ್ತಿದ್ದರು. ಇಂದು ಅವರು ಬೀದಿಗೆ ಬೀಳುವಂತಾಗಿದೆ. 2020ರ ಲಾಕ್​ಡೌನ್​ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿತ್ರೋದ್ಯಮದ 6 ಸಾವಿರ ಕುಟುಂಬಗಳಿಗೆ ತಲಾ 3,000 ರೂ. ಮೌಲ್ಯದ ದಿನಸಿ, ಪಡಿತರ, ರಿಲಯನ್ಸ್ ಕೂಪನ್ ಅನ್ನು ಸರ್ಕಾರದ ವತಿಯಿಂದ ನೀಡಿದ್ದನ್ನು ಚಿತ್ರರಂಗ ಸ್ಮರಿಸುತ್ತದೆ.

ಅಂತೆಯೇ ಇಂದಿನ ಸಂಕಷ್ಟದ ಸಮಯದಲ್ಲೂ 5 ಸಾವಿರ ರೂ. ಮೌಲ್ಯದ ಆಹಾರ ಪಡಿತರ ಕೂಪನ್ ಹಾಗು ಇತರೆ ವಿಶೇಷ ನೆರವನ್ನು ನೀಡಿದಲ್ಲಿ ಚಿತ್ರೋದ್ಯಮಕ್ಕೆ ಆಸರೆಯಾದಂತಾಗುತ್ತದೆ. ಜೊತೆಗೆ ಚಿತ್ರೋದ್ಯಮವನ್ನು ಆದ್ಯತೆ ಎಂದು ಪರಿಗಣಿಸಿ, ಕೋವಿಡ್ ಲಸಿಕೆ ಹಾಕಲು ಪ್ರತ್ಯೇಕವಾದ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮೊದಲ ಹಂತದ ಪ್ಯಾಕೇಜ್​ನಲ್ಲಿ ಕೆಲವರು ಬಿಟ್ಟು ಹೋಗಿರುವುದು ಗಮನಕ್ಕೆ ಬಂದಿದೆ. ಮುಂದಿನ ಪ್ಯಾಕೇಜ್ ಘೋಷಣೆ ಸಂದರ್ಭದಲ್ಲಿ ಚಿತ್ರೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿರುವುದಾಗಿ ಪುರಾಣಿಕ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ಕೋವಿಡ್ ಸಂದರ್ಭದಲ್ಲಿ ಸಾಧ್ಯವಿಲ್ಲದಿರುವುದರಿಂದ ಅಕಾಡೆಮಿಯೊಂದಿಗೆ ಸಹಕರಿಸಿದ ಚಿತ್ರೋದ್ಯಮದ ಎಲ್ಲ ವಿಭಾಗದ ಸಂಘಟನೆಗಳಿಗೆ ಸುನೀಲ್ ಪುರಾಣಿಕ್ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಪ್ರತಿ 100 ರಲ್ಲಿ 33 ಜನರಿಗೆ ಸೋಂಕು: ಗುಣಮುಖ ಪ್ರಮಾಣ ದುಪ್ಪಟ್ಟು

ABOUT THE AUTHOR

...view details