ಕರ್ನಾಟಕ

karnataka

ETV Bharat / city

ಉದ್ಯಮಿಗಳನ್ನು ಪ್ರೋತ್ಸಾಹಿಸಲು ಕನ್ನಡದಲ್ಲಿ ಫೈನಾನ್ಸಿಯಲ್ ಫ್ರೀಡಂ ಆ್ಯಪ್​ ಬಿಡುಗಡೆ - ಇಂಡಿಯನ್ ಮನಿ ಡಾಟ್ ಕಾಂನ ಸಿಇಒಸಿಎಸ್ ಸುಧೀರ್

ನವೋದ್ಯಮಗಳಿಗೆ ಬೇಕಿರುವ ಕೌಶಲಗಳಿಗೆ ತರಬೇತಿ ನೀಡುವ ಸಲುವಾಗಿ ಸರ್ಕಾರದ ಸಹಯೋಗದೊಂದಿಗೆ ಎಫ್​ಕೆಸಿಸಿಐ ಒಂದು ವಿಶೇಷ ತರಬೇತಿ ಕೇಂದ್ರ ಆರಂಭಿಸಲಿದೆ. ಈ ಹೊಸ ಕೇಂದ್ರದ ನಿರ್ಮಾಣದಿಂದ ಹೆಚ್ಚು ವೃತ್ತಿಪರರನ್ನು ಸೃಷ್ಟಿಸಿ ಉದ್ದಿಮೆಗಳನ್ನು ಬೆಳಸಲು ಸಾಧ್ಯವಾಗುತ್ತದೆ ಎಂದು ಎಫ್​ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ಹೇಳಿದರು.

Financial Freedom App launched in Kannada to encourage entrepreneurs
ಉದ್ಯಮಿಗಳನ್ನು ಪ್ರೋತ್ಸಾಹಿಸಲು ಕನ್ನಡದಲ್ಲಿ ಫೈನಾನ್ಸಿಯಲ್ ಫ್ರೀಡಂ ಆ್ಯಪ್​ ಬಿಡುಗಡೆ

By

Published : Oct 8, 2020, 6:11 PM IST

ಬೆಂಗಳೂರು: ಉದ್ಯಮಿಗಳಾಗಬೇಕೆಂದು ಬಯಸುವವರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯಲ್ಲಿ ಇಂಡಿಯನ್ ಮನಿ ಡಾಟ್ ಕಾಂನ ಫೈನಾನ್ಸಿಯಲ್ ಫ್ರೀಡಂ ಆ್ಯಪ್​ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿರುವ ಕೋರ್ಸ್​ಗಳನ್ನು ಎಫ್​ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ಲೋಕಾರ್ಪಣೆಗೊಳಿಸಿದರು.

ಉದ್ಯಮಿಗಳನ್ನು ಪ್ರೋತ್ಸಾಹಿಸಲು ಕನ್ನಡದಲ್ಲಿ ಫೈನಾನ್ಸಿಯಲ್ ಫ್ರೀಡಂ ಆ್ಯಪ್​ ಬಿಡುಗಡೆ
ಶಾಂತಿನಗರದ ಇಂಡಿಯನ್ ಮನಿ ಡಾಟ್ ಕಾಂ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯಮಿಗಳಾಗಬೇಕು ಎನ್ನುವವರಿಗೆ ಸರಿಯಾದ ಮಾರ್ಗದರ್ಶನದ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಫೈನಾನ್ಸಿಯಲ್ ಫ್ರೀಡಂ ಆ್ಯಪ್​ನಲ್ಲಿರುವ ‘ಬಿಸಿನೆಸ್ ಕಟ್ಟುವುದು ಹೇಗೆ?’ ಎನ್ನುವ ಕೋರ್ಸ್ ಉಪಯುಕ್ತವಾಗಿದೆ. ಅದರಲ್ಲೂ ಕನ್ನಡದಲ್ಲೇ ಈ ಕೋರ್ಸ್ ಆರಂಭಿಸಿರುವುದು ಮೆಚ್ಚುಗೆ ಪಡುವಂತಹ ವಿಚಾರ. ಬೆಂಗಳೂರು ಸ್ಟಾರ್ಟ್ ಅಪ್ ಉದ್ದಿಮೆಗಳ ರಾಜಧಾನಿಯಾಗಿದೆ. ನವೋದ್ಯಮಗಳಿಗೆ ಬೇಕಿರುವ ಕೌಶಲಗಳಿಗೆ ತರಬೇತಿ ನೀಡುವ ಸಲುವಾಗಿ ಸರ್ಕಾರದ ಸಹಯೋಗದೊಂದಿಗೆ ಎಫ್​ಕೆಸಿಸಿಐ ಒಂದು ವಿಶೇಷ ತರಬೇತಿ ಕೇಂದ್ರ ಆರಂಭಿಸಲಿದೆ. ಈ ಹೊಸ ಕೇಂದ್ರದ ನಿರ್ಮಾಣದಿಂದ ಹೆಚ್ಚು ವೃತ್ತಿಪರರನ್ನು ಸೃಷ್ಟಿಸಿ ಉದ್ದಿಮೆಗಳನ್ನು ಬೆಳಸಲು ಸಾಧ್ಯವಾಗುತ್ತದೆ ಎಂದರು.

ಬಳಿಕ ಮಾತನಾಡಿದ ಇಂಡಿಯನ್ ಮನಿ ಡಾಟ್ ಕಾಂನ ಸಿಇಒಸಿಎಸ್ ಸುಧೀರ್, ಫೈನಾನ್ಸಿಯಲ್ ಫ್ರೀಡಂ ಆ್ಯಪ್​ನಲ್ಲಿರುವ ಬಿಸಿನೆಸ್ ಕಟ್ಟುವುದು ಹೇಗೆ? ಎನ್ನುವ ಕೋರ್ಸ್ ಪರಿಚಯಿಸಲಾಗಿದೆ. ಸ್ವಂತ ಉದ್ದಿಮೆ ಆರಂಭಿಸಬೇಕು ಎಂಬುವವರಿಗೆ ಈ ಕೋರ್ಸ್​ ಉಪಯುಕ್ತವಾಗಲಿದೆ.ಈ ಕೋರ್ಸ್​ ಮೂಲಕ ಕಟ್ಟಿರುವ ಉದ್ದಿಮೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಬೇಕು. ಬೆಳೆಸಿರುವ ಉದ್ಯಮವನ್ನು ವಿಸ್ತರಿಸಬೇಕು ಎಂದು ಕೊಂಡಿರುವವರಿಗೆ ಅನುಕೂಲವಾಗಲಿದೆ. ಹೆಚ್ಚು ಜನರಿಗೆ ಈ ವಿಚಾರ ತಲುಪಬೇಕು ಎನ್ನುವ ಉದ್ದೇಶದಿಂದ ಕನ್ನಡದಲ್ಲೇ ಈ ಕೋರ್ಸ್ ವಿನ್ಯಾಸಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ಮತ್ತಷ್ಟು ಕೋರ್ಸ್​ಗಳನ್ನು ರೂಪಿಸಲಾಗುತ್ತದೆ ಎಂದು ವಿವರಿಸಿದರು.

ABOUT THE AUTHOR

...view details