ಕರ್ನಾಟಕ

karnataka

ಗಂಡ ಹೆಂಡತಿ ಜಗಳದಲ್ಲಿ ಮಧ್ಯೆ ಪ್ರವೇಶಿಸಿ ದುಡ್ಡು ಮಾಡಲು ಯತ್ನ: ಇನ್ಸ್​ಪೆಕ್ಟರ್​ ವಿರುದ್ಧ ಎಫ್ಐಆರ್

By

Published : Dec 26, 2021, 4:23 AM IST

ಗಂಡ-ಹೆಂಡತಿ ಜಗಳದಲ್ಲಿ ಮಧ್ಯೆ ಪ್ರವೇಶಿಸಿ ದುಡ್ಡು ಮಾಡಲು ಯತ್ನಿಸುತ್ತಿದ್ದ ಇನ್ಸ್​ಪೆಕ್ಟರ್​ ವಿರುದ್ಧ ಬೆಂಗಳೂರಿನಲ್ಲಿ ಎಫ್. ಐ. ಆರ್ ದಾಖಲಾಗಿದೆ.

FIR against Inspector, FIR against Inspector in Bengaluru, ACB register case on inspector, Bengaluru crime news, ಇನ್ಸ್​ಪೆಕ್ಟರ್​ ವಿರುದ್ಧ ಎಫ್​ಆರ್​ಐ ದಾಖಲು, ಬೆಂಗಳೂರಿನಲ್ಲಿ ಇನ್ಸ್​ಪೆಕ್ಟರ್​ ವಿರುದ್ಧ ಎಫ್​ಆರ್​ಐ ದಾಖಲು, ಇನ್ಸ್​ಪೆಕ್ಟರ್​ ವಿರುದ್ಧ ಪ್ರಕರಣ ದಾಖಲಿಸಿದ ಎಸಿಬಿ, ಬೆಂಗಳೂರು ಅಪರಾಧ ಸುದ್ದಿ,
ಇನ್ಸ್​ಪೆಕ್ಟರ್​ ವಿರುದ್ಧ ಎಫ್ಐಆರ್

ಬೆಂಗಳೂರು:ಗಂಡ ಹೆಂಡತಿಯ ಜಗಳದಲ್ಲಿ ಲಾಭ ಪಡೆಯಲು ಯತ್ನಿಸಿದ ಪೊಲೀಸ್ ಇನ್ಸ್​ಪೆಕ್ಟರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಫ್‌ಐಆರ್ ದಾಖಲಿಸಿದೆ.

ಕೆ.ಆರ್. ಪುರ ಠಾಣೆಯಲ್ಲಿ ಇನ್ಸ್​ಪೆಕ್ಟರ್ ಆಗಿದ್ದ ಜಯರಾಜ್ ಮತ್ತು ಎಎಸ್ಐ ಶಿವಕುಮಾರ್ ಎಂಬವರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆ ಸಂಜು ರಾಜನ್ ವಿರುದ್ಧ ಆಕೆಯ ಪತ್ನಿ ದೂರು ದಾಖಲಿಸಿದ್ದರು. ಹೀಗಾಗಿ ಬಂಧನಕ್ಕೆ ಒಳಗಾಗಿದ್ದ ಸಂಜು ರಾಜನ್ ಬಳಿಕ ಜಾಮೀನಿನ ಮೇರೆಗೆ ಹೊರಬಂದಿದ್ದ. ನಂತರ ಪ್ರತಿ ಬಾರಿ ಠಾಣೆಗೆ ಆಗಮಿಸಿ ಸಹಿ ಮಾಡಲು ಸಂಜುರಿಂದ ಪೊಲೀಸರು 500 ರಿಂದ 10 ಸಾವಿರ ರೂ. ವರೆಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು.

ಜಯರಾಜ್ ಸದ್ಯ ಸಿಐಡಿಯಲ್ಲಿ ಕೆಲಸ ಮಾಡುತ್ತಿದ್ದು, ಶಿವಕುಮಾರ್ ಕೆ.ಆರ್.ಪುರ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಲಂಚ ಪಡೆದ ಕುರಿತು ದೂರು ದಾಖಲಿಸಿ ತನಿಖೆ ನಡೆಸಿದ ಎಸಿಬಿ ಅಧಿಕಾರಿಗಳು, ಇನ್ಸ್​ಪೆಕ್ಟರ್ ವಿರುದ್ಧ ಕ್ರಮಕ್ಕೆ ಅನುಮತಿ ನೀಡಬೇಕೆಂದು 17ಎ ಅಡಿ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ. ಅಲ್ಲಿಂದ ಅನುಮತಿ ಸಿಕ್ಕ ಬಳಿಕ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ABOUT THE AUTHOR

...view details