ಬೆಂಗಳೂರು :ಇತ್ತೀಚೆಗಷ್ಟೆ ಆನ್‌ಲೈನ್ ಜೂಜು ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆಯನ್ನು ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಆನ್‌ಲೈನ್ ಗೇಮಿಂಗ್ ಡ್ರೀಮ್ 11 ಆ್ಯಪ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜಧಾನಿಯ ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ಮಂಜುನಾಥ್ ಎಂಬುವರು ಡ್ರೀಮ್ 11 ಆ್ಯಪ್ ವಿರುದ್ಧ ದೂರು ದಾಖಲಿಸಿದ್ದಾರೆ. ಡ್ರೀಮ್ 11 ಆ್ಯಪ್ನಲ್ಲಿ ಕೋಟಿಗಟ್ಟಲೇ ಗೆಲ್ಲಬಹುದು. ಹಲವರು ಈಗಾಗಲೇ ಗೆದ್ದಿದ್ದಾರೆ ಎಂದು ಆಸೆ ತೋರಿಸಿ ಈಗಲೂ ಪ್ರಚೋದನೆ ಮಾಡಲಾಗುತ್ತಿದೆ ಎಂದು ಡ್ರೀಮ್ ಸ್ಪೋರ್ಟ್ಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ದೂರು ನೀಡಿದ್ದಾರೆ.