ETV Bharat Karnataka

ಕರ್ನಾಟಕ

karnataka

ETV Bharat / city

ಯುವತಿ ಜೊತೆಗಿನ ನಗ್ನ ವಿಡಿಯೋ ಇದೆ ಎಂದು ಬಿಜೆಪಿ ಮುಖಂಡನಿಗೆ ಬ್ಲ್ಯಾಕ್ ಮೇಲ್! - ಬಿಜೆಪಿ ಮುಖಂಡ ಚಿ.ನಾ.ರಾಮುಗೆ ಬ್ಲ್ಯಾಕ್ ಮೇಲ್

ಯುವತಿಯೊಂದಿಗೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ. ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಅಪರಿಚಿತನೋರ್ವ ಬೆದರಿಕೆ ಹಾಕುತ್ತಿದ್ದಾನೆ ಎಂದು ಬಿಜೆಪಿ ಮುಖಂಡ ಚಿ.ನಾ. ರಾಮು ದೂರು ದಾಖಲಿಸಿದ್ದಾರೆ.

ಬಿಜೆಪಿ ಮುಖಂಡ ಚಿ.ನಾ.ರಾಮು
ಬಿಜೆಪಿ ಮುಖಂಡ ಚಿ.ನಾ.ರಾಮು
author img

By

Published : Aug 22, 2021, 10:50 AM IST

ಬೆಂಗಳೂರು: ಅಪರಿಚಿತ ವ್ಯಕ್ತಿವೋರ್ವ ಕರೆ ಮಾಡಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಬಿಜೆಪಿ ರಾಷ್ಟ್ರೀಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಹಾಗೂ ಡಾ. ಅಂಬೇಡ್ಕರ್ ಫೌಂಡೇಷನ್‌ ನಿರ್ದೇಶಕ ಚಿ.ನಾ. ರಾಮು ಅವರು ಬೆಂಗಳೂರು ಸೆಂಟ್ರಲ್ ಸಿಇಎನ್ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಪರಿಚಿತ ವ್ಯಕ್ತಿ ಫೋನ್‌ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಫೇಸ್‌ಬುಕ್‌ ಮೆಸೆಂಜರ್‌ ಮೂಲಕ ಪರಿಚಯವಾಗಿದ್ದ ಮಹಿಳೆ ಮೊಬೈಲ್ ನಂಬರ್ ಪಡೆದು ವಾಟ್ಸಾಪ್ ಮೂಲಕ ವಿಡಿಯೋ ಕಾಲ್ ಮಾಡಿದ್ದಳು. ವಿಡಿಯೋದಲ್ಲಿ ಅಸಭ್ಯವಾಗಿ ವರ್ತಿಸಿದ್ದಳು. ಆ ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಒಡ್ಡುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೈಬರ್ ಪೊಲೀಸರಿಂದ ತನಿಖೆ:
ಯುವತಿಯೊಂದಿಗೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ. ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಬೆಂಗಳೂರು ಸೆಂಟ್ರಲ್ ಸಿಇಎನ್ ಸೈಬರ್ ಠಾಣೆಗೆ ರಾಮು ದೂರು ಸಲ್ಲಿಸಿದ್ದಾರೆ.

ವ್ಯಕ್ತಿಯ ಬೆದರಿಕೆಗೆ ಹೆದರಿ ಬಿಜೆಪಿ ಮುಖಂಡ ಚಿ.ನಾ. ರಾಮು ಈಗಾಗಲೇ 31,500 ರೂ. ಹಣವನ್ನು ಅಪರಿಚಿತನ ಖಾತೆಗೆ ಜಮೆ ಮಾಡಿದ್ದಾರೆ. ದೂರನ್ನು ಆಧರಿಸಿ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂಬೇಡ್ಕರ್ ಫೌಂಡೇಶನ್:ಚಿ.ನಾ.ರಾಮು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಅಧೀನ ಸಂಸ್ಥೆಯಾದ ಅಂಬೇಡ್ಕರ್ ಫೌಂಡೇಶನ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ABOUT THE AUTHOR

...view details