ದೊಡ್ಡಬಳ್ಳಾಪುರ :ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಪ್ಲಾಸ್ಟಿಕ್ ಹೂಕುಂಡ ತಯಾರಿಸುವ ಫ್ಯಾಕ್ಟರಿ ಹೊತ್ತಿ ಉರಿದಿದೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಚನ್ನಕೇಶವ ಎಂಟರ್ ಪ್ರೈಸಸ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ : ಹೊತ್ತಿ ಉರಿದ ಪ್ಲಾಸ್ಟಿಕ್ ಹೂಕುಂಡ ತಯಾರಿಕಾ ಫ್ಯಾಕ್ಟರಿ - Fire accident in plastic flower pot manufacturing factory
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
ಹೊತ್ತಿ ಉರಿದ ಪ್ಲಾಸ್ಟಿಕ್ ಹೂ ಕುಂಡ ತಯಾರಿಕಾ ಫ್ಯಾಕ್ಟರಿ
ಫ್ಯಾಕ್ಟರಿಯಲ್ಲಿ ಅಲಂಕಾರಿಕ ಹೂಗಳನ್ನ ಬೆಳೆಸುವ ಹೂಗಳ ಕುಂಡಗಳನ್ನ ತಯಾರಿಸಲಾಗುತ್ತಿತ್ತು. ಇಂದು ಸಂಜೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಫ್ಯಾಕ್ಟರಿ ಬೆಂಕಿಗೆ ಆಹುತಿಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.