ಕರ್ನಾಟಕ

karnataka

ಬೆಂಗಳೂರಿನ ಬೆಳ್ಳಂದೂರು ಕೆರೆಯ ಬಳಿ ಅಗ್ನಿ ಅವಘಡ

By

Published : Mar 5, 2021, 2:24 AM IST

ರಾಸಾಯನಿಕ ಯುಕ್ತ ನೊರೆಯ ಮೂಲಕ ಕುಖ್ಯಾತಿ ಪಡೆದಿದ್ದ ಬೆಂಗಳೂರಿನ ಬೆಳ್ಳಂದೂರು ಕೆರೆಯ ಬಳಿ ಬೆಂಕಿ ಕಾಣಿಸಿಕೊಂಡಿದೆ.

fire broke out at Bellandur Lake
ಬೆಂಗಳೂರಿನ ಬೆಳ್ಳಂದೂರು ಕೆರೆಯ ಬಳಿ ಅಗ್ನಿ ಅವಘಡ

ಬೆಂಗಳೂರು : ಬೆಳ್ಳಂದೂರು ಕೆರೆಯ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಮತ್ತು ಲೇಕ್ ಮಾರ್ಷ್​ಲ್​ಗಳು ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಇನ್ನು ಬೆಂಗಳೂರು ನಗರದ ಆಗ್ನೇಯ ಭಾಗದಲ್ಲಿರುವ ಈ ಕೆರೆ ನಗರದ ಅತಿ ದೊಡ್ಡ ಕೆರೆಗಳಲ್ಲಿ ಒಂದಾಗಿದೆ. ಕೆಲವು ವರ್ಷಗಳ ಹಿಂದೆ ರಾಸಾಯನಿಕಯುಕ್ತ ನೊರೆ ಕಾಣಿಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು.

ABOUT THE AUTHOR

...view details