ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ):ಅಗ್ನಿ ಅವಘಡದಿಂದಾಗಿ ಗ್ಯಾಸ್ ಬುಕ್ಕಿಂಗ್ ಮತ್ತು ಕೇಬಲ್ ಕಚೇರಿ ಸಂಪೂರ್ಣ ಸುಟ್ಟುಹೋಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ.
ಮಂಜುಶ್ರೀ ಗ್ಯಾಸ್ ಮತ್ತು ಕೇಬಲ್ ಬುಕ್ಕಿಂಗ್ ಕಚೇರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಆದರೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬರಲು ತಡವಾದ ಹಿನ್ನೆಲೆಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಚೇರಿಯ ಪಿಠೋಪಕರಣಗಳು ಸುಟ್ಟು ಬೂದಿಯಾಗಿವೆ.