ದೇವನಹಳ್ಳಿ: ಮನೆ ಮುಂದೆ ನಿಲ್ಲಿಸಿದ ಬೈಕ್ ಗಳಿಗೆ ಮುಂಜಾನೆ ವೇಳೆ ಪ್ರೆಟ್ರೋಲ್ ಸುರಿದು ಬೆಂಕಿ ಇಟ್ಟು ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.
ಮನೆ ಮುಂದೆ ನಿಲ್ಲಿಸಿದ ಬೈಕ್ ಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು ಪರಾರಿ - Fire to bike
ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಕಿಡಿಗೇಡಿಗಳು ಇಂದು ಮುಂಜಾನೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಪರಾರಿಯಾಗಿದ್ದಾರೆ.
ಬೈಕ್ಗೆ ಬೆಂಕಿ
ಯಾರಬ್ ಮತ್ತು ಜೆಲಾನಿ ಎಂಬುವವರಿಗೆ ಸೇರಿದ ಬೈಕ್ಗಳಿಗೆ ಇಂದು ಮುಂಜಾನೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕಿಡಿಗೇಡಿಗಳು ಪರಾರಿಯಾಗಿದ್ದಾರೆ, ಮೊದಲಿಗೆ ಪಲ್ಸರ್ ಬೈಕ್ ಹೊತ್ತಿ ಉರಿದು ನಂತರ ಪಕ್ಕದಲ್ಲಿಯೇ ಇದ್ದ ಸ್ಕೂಟಿಗೂ ಬೆಂಕಿ ತಗುಲಿದೆ.
ಘಟನೆಯಲ್ಲಿ ಎರಡು ವಾಹನಗಳು ಸುಟ್ಟು ಕರಕಲಾಗಿವೆ. ಈ ಬಗ್ಗೆ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.