ಶಿವಮೊಗ್ಗ : ತಾಲೂಕಿನ ಹೊಸಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟದ ಮನೆಯೊಂದರಲ್ಲಿ ಮತದಾರರಿಗೆ ಹಂಚಲು ತಯಾರಿಸಿದ್ದ ಪಲಾವ್ನ್ನು ಚುನಾವಣಾ ನೀತಿ ಸಂಹಿತೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಂಸಿಸಿ ತಂಡ, ಪಲಾವ್ ಸೇರಿದಂತೆ ಅಡುಗೆ ಸಾಮಾನುಗಳನ್ನು ವಶಕ್ಕೆ ಪಡೆದುಕೊಂಡಿದೆ. ಈ ವೇಳೆ ಸ್ಥಳದಲ್ಲಿದ್ದವರು ಪರಾರಿಯಾಗಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಎಂಸಿಸಿ ತಂಡದಲ್ಲಿ ತಾ.ಪಂ ಇಒ ಡಾ.ಕಲ್ಲಪ್ಪ ಹಾಗೂ ಸಿಡಿಪಒ ಚಂದ್ರಪ್ಪ ಇದ್ದರು.