ಬೆಂಗಳೂರು :ಸಿಲಿಕಾನ್ ಸಿಟಿಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಬಹುತೇಕ ಎಲ್ಲ ಬಡಾವಣೆಗಳಲ್ಲಿ ಮಳೆಯಾಗಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದ ರಾಜ್ಯದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಬಿಸಿಲ ಬೇಗೆಯಿಂದ ಬೇಸತ್ತಿದ್ದ ಜನರು ಹಾಗೂ ರೈತರು ನಿಟ್ಟುಸಿರು ಬಿಡುತ್ತಿದ್ದಾರೆ. ಸಂಜೆಯ ವೇಳೆಯಲ್ಲಿ ರಾಜಧಾನಿಯ ಮಲ್ಲೇಶ್ವರ, ಸದಾಶಿವನಗರ, ಚಾಮರಾಜಪೇಟೆಯಲ್ಲಿ ಮೊದಲ ಮಳೆಯ ಸಿಂಚನವಾಗಿದೆ.