ಕರ್ನಾಟಕ

karnataka

By

Published : Feb 9, 2021, 7:29 PM IST

ETV Bharat / city

ಅರಣ್ಯ ಇಲಾಖೆ ಸಿಬ್ಬಂದಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಅರವಿಂದ ಲಿಂಬಾವಳಿ ಭರವಸೆ

ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗೆ ಅಗತ್ಯ ಇರುವ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ. ನಾನು ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ. ಅಧಿಕಾರಿಗಳ ಸಮಸ್ಯೆಗಳನ್ನೂ ಸಕಾರಾತ್ಮಕವಾಗಿ ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಭರವಸೆ ಮಾಡಿದ್ದಾರೆ.

Forest Minister Arvind Limbavali meeting
ಅರಣ್ಯ ಇಲಾಖೆ ಸಿಬ್ಬಂದಿಯ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ : ಅರವಿಂದ ಲಿಂಬಾವಳಿ

ಬೆಂಗಳೂರು:ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ವಿವಿಧ ವರ್ಗದ ಅಧಿಕಾರಿ ಮತ್ತು ನೌಕರ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಭೆ ನಡೆಸಿದರು.

ವಿಕಾಸೌಧದಲ್ಲಿ ನಡೆದ ಸಭೆಯಲ್ಲಿ ಅರಣ್ಯ ಇಲಾಖೆ ನೌಕರರ ಸಮಸ್ಯೆ ಹಾಗೂ ಪರಿಹಾರ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಸಿದರು. ಇಲಾಖೆಯ ವಿವಿಧ ಹಂತದಲ್ಲಿ, ಅದರಲ್ಲಿಯೂ ವಿಶೇಷವಾಗಿ ಕೆಳ ಮಧ್ಯಮ ಕ್ರಮಾಂಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗೆ ಅಗತ್ಯ ಇರುವ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ. ನಾನು ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ. ಅಧಿಕಾರಿಗಳ ಸಮಸ್ಯೆಗಳನ್ನೂ ಸಕಾರಾತ್ಮಕವಾಗಿ ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ವಾರದ ರಜೆ, ವೇತನ ತಾರತಮ್ಯ, ರಿಸ್ಕ್ ಭತ್ಯೆ, ವೇತನ, ಭತ್ಯೆ ಹೆಚ್ಚಳ ಮುಂತಾದ ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ವಲಯ ಅರಣ್ಯ ಅಧಿಕಾರಿಗಳ ಸಂಘ, ಉಪ ಅರಣ್ಯ ಅಧಿಕಾರಿಗಳ ಸಂಘ, ಅರಣ್ಯ ರಕ್ಷಕರ ಸಂಘ, ಕಾವಡಿ ಮತ್ತು ಮಾವುತರ ಸಂಘ, ಕರ್ಣಾಟಕ ರಾಜ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಸಂಘ ಮತ್ತು ಅರಣ್ಯ ಪ್ರೇರಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

ABOUT THE AUTHOR

...view details