ಕರ್ನಾಟಕ

karnataka

By

Published : May 8, 2022, 7:46 PM IST

ETV Bharat / city

ನಿವೃತ್ತ ನ್ಯಾ. ರತ್ನಕಲಾ ನೇತೃತ್ವದಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ರಚನೆ

ಈ ಸಮಿತಿಯು 50 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಟೆಂಡರ್​ಗಳನ್ನು ಪರಿಶೀಲಿಸಿ, ಅದರ ಪಾರದರ್ಶಕ, ನ್ಯಾಯಸಮ್ಮತವಾಗಿರುವ ಕುರಿತು ದೃಢಪಡಿಸಲಿದೆ.

Formation of Pre-tender Review Committee
ಹೈಕೋರ್ಟ್ ನಿವೃತ್ತ ನ್ಯಾ. ರತ್ನಕಲಾ ನೇತೃತ್ವದಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ರಚನೆ

ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯಲ್ಲಿ ಇಬ್ಬರು ಸದಸ್ಯರ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಸಮಿತಿಯು 50 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಟೆಂಡರ್​ಗಳನ್ನು ಪರಿಶೀಲಿಸಿ, ಅದರ ಪಾರದರ್ಶಕ, ನ್ಯಾಯಸಮ್ಮತವಾಗಿರುವ ಕುರಿತು ದೃಢಪಡಿಸಲಿದೆ. ಯೋಜನೆಯನ್ನು ರೂಪಿಸಲಾಗಿರುವ ರೀತಿ, ಅದಕ್ಕೆ ತಗುಲುವ ವೆಚ್ಚದ ಕುರಿತು ಸಮಿತಿ ಮೇಲ್ವಿಚಾರಣೆ ನಡೆಸಲಿದೆ.

ಸರ್ಕಾರದ ವಿರುದ್ಧ ಕಾಮಗಾರಿಗಳಲ್ಲಿ ಶೇ. 40ರಷ್ಟು ಕಮಿಷನ್ ಆರೋಪ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸುವ ಮೂಲಕ ಪ್ರತಿಪಕ್ಷಗಳ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಕೈ ಹಾಕಿದೆ.

ಇದನ್ನೂ ಓದಿ:ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಬಹಿರಂಗ: ಪರೀಕ್ಷಾ ಪ್ರಕ್ರಿಯೆ ರದ್ದುಪಡಿಸಿದ ರಾಜ್ಯ ಸರ್ಕಾರ

ABOUT THE AUTHOR

...view details