ಕರ್ನಾಟಕ

karnataka

ETV Bharat / city

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುತ್ತಿರುವುದು ಸರ್ಕಾರಕ್ಕೆ ಶೋಭೆ ತರದು: ಹೆಚ್​​ಡಿಕೆ ಗರಂ - Yelahanka Overpass

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

former chief minister hd kumaraswamy tweet
ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುತ್ತಿರುವುದು ಸರ್ಕಾರಕ್ಕೆ ಶೋಭೆ ತರದು: ಹೆಚ್​​ಡಿಕೆ ಗರಂ

By

Published : May 27, 2020, 2:46 PM IST

ಬೆಂಗಳೂರು:ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಆಗುತ್ತಿರುವ ಅಪಮಾನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುತ್ತಿರುವುದು ಸರ್ಕಾರಕ್ಕೆ ಶೋಭೆ ತರದು: ಹೆಚ್​​ಡಿಕೆ ಗರಂ

ಈ ಕುರಿತು ಟ್ವೀಟ್ ಮಾಡಿರುವ ಅವರು, ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು ಎಂದು ಕಿಡಿಕಾರಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನ ಈ ಮೇಲ್ಸೇತುವೆಗೆ ಇಡಬಹುದಿತ್ತು ಎಂದಿದ್ದಾರೆ.

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುತ್ತಿರುವುದು ಸರ್ಕಾರಕ್ಕೆ ಶೋಭೆ ತರದು: ಹೆಚ್​​ಡಿಕೆ ಗರಂ

ರಾಜ್ಯದ ಹೋರಾಟಗಾರರ ಹೆಸರನ್ನ ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹಿಸಿದ್ದಾರೆ.

ABOUT THE AUTHOR

...view details