ಕರ್ನಾಟಕ

karnataka

ETV Bharat / city

ಮಾಜಿ ಸಿಎಂ ಸಿದ್ದರಾಮಯ್ಯಗೆ ಟ್ವೀಟ್​ ಮೂಲಕ ಟಾಂಗ್ ಕೊಟ್ಟ ಹೆಚ್​ಡಿಕೆ! - ಬೆಂಗಳೂರು ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ, ರಾಜ್ಯದಲ್ಲಿ 8 ಇಲ್ಲವೆ 10 ಸ್ಥಾನ ಗೆಲ್ಲಬಹುದಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಟ್ವೀಟ್​ ಮೂಲಕ ಟಾಂಗ್ ನೀಡಿದ್ದಾರೆ..

Former Chief Minister HD Kumaraswamy tweet
ಮಾಜಿ ಸಿಎಂ ಸಿದ್ದರಾಮಯ್ಯಗೆ ಟ್ವೀಟ್​ ಮೂಲಕ ಟಾಂಗ್ ಕೊಟ್ಟ ಹೆಚ್​ಡಿಕೆ!

By

Published : Jul 22, 2020, 3:49 PM IST

ಬೆಂಗಳೂರು :ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಿದ್ರೆ, ರಾಜ್ಯದಲ್ಲಿ 8 ಇಲ್ಲವೇ 10 ಸ್ಥಾನ ಗೆಲ್ಲಬಹುದಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚಿಗೆ 'ಮೆಲುಕು' ಹಾಕಿದ್ದರಿಂದಲೇ ನಾನು ಸಿದ್ಧೌಷಧದ ಬಗ್ಗೆ ನೆನಪಿಸಿಕೊಳ್ಳಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಟ್ವೀಟ್​ ಮೂಲಕ ಟಾಂಗ್ ಕೊಟ್ಟ ಹೆಚ್​ಡಿಕೆ!

ಈ ಕುರಿತು ಟ್ವೀಟ್ ಮಾಡಿರುವ ಅವರು, ಅವರ ಕನಸು-ಕನವರಿಕೆಗಳನ್ನು ಮೈತ್ರಿ ಸರ್ಕಾರ ಹೋದ ನಂತರವೂ ಜಪಿಸುತ್ತಿರುವುದರಿಂದಲೇ ಹಳೆಯದನ್ನು ನೆನಪಿಸಿಕೊಳ್ಳಬೇಕಾಯಿತು. ನಮ್ಮ ಅವರ ದೋಸ್ತಿ ಕಳಚಿದ ನಂತರ ಈ ಬಗ್ಗೆ ನಾನು ಮಾತನಾಡಿರಲಿಲ್ಲ. ಕಾಂಗ್ರೆಸ್ ನಾಯಕರೇ ಪದೇಪದೆ ಮೈತ್ರಿ ಮುಗಿದ ಅಧ್ಯಾಯ ಎಂದು ಈಗ ತುಟಿ ಬಿಚ್ಚುತ್ತಿರುವುದರಿಂದ ನಾನು ಮೌನ ಮುರಿಯಬೇಕಾಯಿತು ಎಂದು ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಟ್ವೀಟ್​ ಮೂಲಕ ಟಾಂಗ್ ಕೊಟ್ಟ ಹೆಚ್​ಡಿಕೆ!

ಕಾಂಗ್ರೆಸ್ ನಾಯಕರು ಈಗ ಮರಣೋತ್ತರ ಪರೀಕ್ಷೆ ಬಗ್ಗೆ ರಾಗ ಎಳೆಯುತ್ತಿದ್ದಾರೆ. ಆದರೆ, ವರದಿಯಲ್ಲಿ ಏನಿದೆ ಎಂಬ ಸತ್ಯಾಂಶವನ್ನು ನಾನು ಹೇಳಿದರೆ ಆ ಭಾಷೆ ನನಗೆ ಅರ್ಥವಾಗಲಿಲ್ಲ ಎಂದು ಜಾರಿಕೊಳ್ಳುವುದು ತರವಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ABOUT THE AUTHOR

...view details