ಕರ್ನಾಟಕ

karnataka

ETV Bharat / city

ಕೊರೊನಾ ಸಂಕಷ್ಟದಲ್ಲೂ ಬಿಜೆಪಿ ಸರ್ಕಾರದಿಂದ ಕುರ್ಚಿ ಉಳಿಸಿಕೊಳ್ಳುವ ಕಸರತ್ತು: ಹೆಚ್​ಡಿಕೆ ಟೀಕೆ

ಸರ್ಕಾರ ಮಾತ್ರವಲ್ಲ, ಜನತೆಯು ಕೂಡ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವಾಗ ಬೊಕ್ಕಸ ಹಾಗೂ ಜನಸಾಮಾನ್ಯನ ಮೇಲೆ ಹೊರೆ ಹೇರುವ ಮೂಲಕ 'ಶಾಸಕರಿಗೆ ಉಡುಗೊರೆ, ಜನತೆಗೆ ಬರೆ' ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆಯನ್ನು ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

Former Chief Minister HD Kumaraswamy tweet
ಕೊರೊನಾ ಸಂಕಷ್ಟದಲ್ಲೂ ಬಿಜೆಪಿ ಸರ್ಕಾರಕ್ಕೆ ಕುರ್ಚಿ ಉಳಿಸಿಕೊಳ್ಳುವ ಕಸರತ್ತು: ಹೆಚ್​ಡಿಕೆ ಟೀಕೆ

By

Published : Jul 27, 2020, 5:42 PM IST

ಬೆಂಗಳೂರು:ಕೊರೊನಾ ಸಂಕಷ್ಟದ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಉಡುಗೊರೆ ನೀಡುವ ಮೂಲಕ ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೊರೊನಾ ಸಂಕಷ್ಟದಲ್ಲೂ ಬಿಜೆಪಿ ಸರ್ಕಾರದಿಂದ ಕುರ್ಚಿ ಉಳಿಸಿಕೊಳ್ಳುವ ಕಸರತ್ತು: ಹೆಚ್​ಡಿಕೆ ಟೀಕೆ

ಈ ಕುರಿತು ಟ್ವೀಟ್ ಮಾಡಿರುವ ಅವರು, ಸರ್ಕಾರ ಮಾತ್ರವಲ್ಲ, ಜನತೆಯು ಕೂಡ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವಾಗ ಬೊಕ್ಕಸ ಹಾಗೂ ಜನಸಾಮಾನ್ಯನ ಮೇಲೆ ಹೊರೆ ಹೇರುವ ಮೂಲಕ 'ಶಾಸಕರಿಗೆ ಉಡುಗೊರೆ, ಜನತೆಗೆ ಬರೆ' ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆಯನ್ನು ಖಂಡಿಸುತ್ತೇನೆ. ಬಿಜೆಪಿ ಸರ್ಕಾರಕ್ಕೆ ಸಾಮಾನ್ಯರ ಹಿತ ಮುಖ್ಯವೋ? ಕುರ್ಚಿ ಉಳಿಸಿಕೊಳ್ಳಲು ಶಾಸಕರ ಹಿತ ಮುಖ್ಯವೋ? ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರನ್ನು ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ ಎಂದು ಕುಟುಕಿದ್ದಾರೆ.

ಕೊರೊನಾ ಸಂಕಷ್ಟದಲ್ಲೂ ಬಿಜೆಪಿ ಸರ್ಕಾರದಿಂದ ಕುರ್ಚಿ ಉಳಿಸಿಕೊಳ್ಳುವ ಕಸರತ್ತು: ಹೆಚ್​ಡಿಕೆ ಟೀಕೆ

ರಾಜ್ಯ ಎದುರಿಸುತ್ತಿರುವ ಇಂತಹ ಸಂಕಷ್ಟದ ಸಮಯದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಗಾದಿಯ ಮೇಲೆ ಸವಾರಿ ಮಾಡುವುದು ವಿಹಿತವೇ ಎಂಬುದನ್ನು ಶಾಸಕರು ಆತ್ಮಸಾಕ್ಷಿಗೆ ಪ್ರಶ್ನೆ ಮಾಡಿಕೊಳ್ಳಲಿ. ಹಗಲ ಇರುಳು ಮಾಡಿ, ಇರುಳ ಹಗಲು ಮಾಡಿ, ಆಚಾರವ ಅನಾಚಾರವ ಮಾಡಿ, ಅನಾಚಾರವ ಆಚಾರವ ಮಾಡಿ ಭಕ್ತನ ಭವಿಯ ಮಾಡಿ, ಭವಿಯ ಭಕ್ತನ ಮಾಡಿ ನುಡಿವವರ ಮಾತ ಕೇಳಲಾಗದು ಗುಹೇಶ್ವರಾ ಎಂದು ವಚನದ ಸಾಲುಗಳ ಮೂಲಕ ಟೀಕಿಸಿದ್ದಾರೆ.

ABOUT THE AUTHOR

...view details