ಬೆಂಗಳೂರು:ಗಡಿಯಲ್ಲಿ ಅಮಾಯಕರ ಬಲಿದಾನದ ನಂತರ ಕೆಲವರಿಗೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಬಗ್ಗೆ ಜ್ಞಾನೋದಯವಾಗಿದೆ. ಆದರೆ, ನನ್ನ ಅಧಿಕಾರಾವಧಿಯಲ್ಲಿ ಈ ಬಗ್ಗೆ ಗಂಭೀರವಾಗಿ ಯೋಚಿಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಚೀನಾ ವಸ್ತುಗಳನ್ನು ಬಹಿಷ್ಕರಿಸುವುದು ಘೋಷವಾಕ್ಯದಷ್ಟು ಸುಲಭವಲ್ಲ. ಅದಕ್ಕೆ ರಚನಾತ್ಮಕ ಯೋಜನೆಗಳು ಬೇಕು. ಮೈತ್ರಿ ಸರ್ಕಾರದ ಯೋಜನೆಗಳು ಅದಕ್ಕೆ ಮಾದರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಅಮಾಯಕರ ಬಲಿದಾನವಾದ ಬಳಿಕ ಕೆಲವರಿಗೆ ಚೀನಾ ಉತ್ಪನ್ನ ಬಹಿಷ್ಕರಿಸುವ ಜ್ಞಾನೋದಯವಾಗಿದೆ..ಹೆಚ್ಡಿಕೆ ಟ್ವೀಟ್ ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, 'ಚೀನಾ ಉತ್ಪನ್ನ ಬಹಿಷ್ಕರಿಸಿ ಎಂಬುದು ದೇಶದ ಆಶೋತ್ತರಗಳಲ್ಲಿ ಒಂದು. ಈ ಕೂಗು ಇತ್ತೀಚೆಗೆ ಹೆಚ್ಚು ಬಲಗೊಳ್ಳುತ್ತಿದೆ. ದೇಶದ ಮಾರುಕಟ್ಟೆ ಆಕ್ರಮಿಸಿಕೊಂಡಿರುವ ಚೀನಾ ಉತ್ಪನ್ನಗಳಿಗೆ ನಮ್ಮ ಉತ್ಪನ್ನಗಳ ಮೂಲಕ ಸೆಡ್ಡು ಹೊಡೆಯಬೇಕೆಂಬ ಪರಿಕಲ್ಪನೆಯಡಿ 2018ರಲ್ಲಿ ‘ಕಾಂಪಿಟ್ ವಿತ್ ಚೀನಾ’ ಎಂಬ ಯೋಜನೆಯನ್ನ ನಾನು ಸಿಎಂ ಆದಾಗ ರೂಪಿಸಲಾಗಿತ್ತು.
ಅಮಾಯಕರ ಬಲಿದಾನವಾದ ಬಳಿಕ ಕೆಲವರಿಗೆ ಚೀನಾ ಉತ್ಪನ್ನ ಬಹಿಷ್ಕರಿಸುವ ಜ್ಞಾನೋದಯವಾಗಿದೆ..ಹೆಚ್ಡಿಕೆ ಟ್ವೀಟ್ ಅಮಾಯಕರ ಬಲಿದಾನವಾದ ಬಳಿಕ ಕೆಲವರಿಗೆ ಚೀನಾ ಉತ್ಪನ್ನ ಬಹಿಷ್ಕರಿಸುವ ಜ್ಞಾನೋದಯವಾಗಿದೆ... ಹೆಚ್ಡಿಕೆ ಟ್ವೀಟ್ ‘ಕಾಂಪಿಟ್ ವಿತ್ ಚೀನಾ’ ಯೋಜನೆ ಜಾರಿಗೆ ತರಲು ನನ್ನ ನೇತೃತ್ವದ ಮೈತ್ರಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಇದಕ್ಕಾಗಿ ಕಲಬುರಗಿ, ಚಿತ್ರದುರ್ಗ, ಹಾಸನ, ಕೊಪ್ಪಳ, ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಜಿಲ್ಲೆಗಳಲ್ಲಿ 9 ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗಿತ್ತು. ಸ್ಥಳೀಯರಿಗೆ ಉದ್ಯೋಗ ಒದಗಿಸುವುದು, ಚೀನಾಕ್ಕೆ ಸಿಕ್ಕಿರುವ ಮಾರುಕಟ್ಟೆಯನ್ನು ಕಸಿದು ನಮ್ಮವರಿಗೆ ಕೊಡುವುದು, ಆ ಮೂಲಕ ಚೀನಾ ಉತ್ಪನ್ನಗಳನ್ನು ಯಶಸ್ವಿಯಾಗಿ ಹೊರ ಹಾಕುವುದು ನನ್ನ ಉದ್ದೇಶವಾಗಿತ್ತು. ಆದರೆ, ಮೈತ್ರಿ ಸರ್ಕಾರದ ಈ ಯೋಜನೆಯನ್ನು ಇಂದಿನ ಸರ್ಕಾರ ಏನು ಮಾಡಿದೆ? ಮುಂದುವರೆಸಿಕೊಂಡು ಹೋಗಿದೆಯೋ ಇಲ್ಲವೋ ತಿಳಿಯದು' ಎಂದಿದ್ದಾರೆ.