ಮೈಸೂರು: ನನ್ನ ರಾಜಕೀಯ ಜೀವನದಲ್ಲಿ ಇದೇ ಮೊದಲಲ್ಲ, ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಕೂಡಾ ನನ್ನ ಮೇಲೆ ಆರೋಪಗಳ ಸುರಿಮಳೆ ಆಗಿವೆ, ಬಹುಶ: ಇದು ಕೊನೆಯದೂ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಆರೋಪಗಳ ವಿಷ ಕುಡಿದೂ ಕುಡಿದು ನಾನು ವಿಷಕಂಠನಾಗಿದ್ದೇನೆ...ಸಿದ್ದು ಟ್ವೀಟ್ - undefined
ನನ್ನ ಮುಂದಾಳತ್ವದಲ್ಲಿ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂಬುದು ನನ್ನ ಮೇಲೆ ಮಾಡುತ್ತಿರುವ ಆರೋಪ ಅಷ್ಟೇ. ಇಂತಹ ಆರೋಪಗಳ ವಿಷ ಕುಡಿದೂ ಕುಡಿದು ನಾನು ವಿಷಕಂಠನಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

'ಇಂತಹ ಸುಳ್ಳು ಆರೋಪಗಳ ವಿಷ ಕುಡಿದೂ ಕುಡಿದು ನಾನು ವಿಷಕಂಠನಾಗಿದ್ದೇನೆ. ಕೊನೆಗೆ ಗೆಲುವುದು ಸತ್ಯ ಮಾತ್ರ. ಸತ್ಯಮೇವ ಜಯತೇ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 'ಸಿದ್ದರಾಮಯ್ಯ ನಮ್ಮ ನಾಯಕರು' ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಬಚ್ಚಿಡುವ ದುರುದ್ದೇಶ ಇರಬಹುದು. ಒಂದು ವೇಳೆ ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ.
ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ. 'ಸಿದ್ದರಾಮಯ್ಯ ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ನೀಡಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆ ಎನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.