ಕರ್ನಾಟಕ

karnataka

ETV Bharat / city

ಕನ್ನಡ ಧ್ವಜಕ್ಕೆ ಬೆಂಕಿ: ಕನ್ನಡ ದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಜಿ ಸಿಎಂ ಹೆಚ್​​ಡಿಕೆ ಆಗ್ರಹ - ಎಂಇಎಸ್​ ವಿರುದ್ಧ ಮಾಜಿ ಸಿಎಂ ಹೆಚ್​ಡಿಕೆ ಕಿಡಿ

ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರ್ಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

former-chief-minitser-hdk-on-kannada-flag-set-on-fire-in-kollapur
ಕನ್ನಡ ಧ್ವಜಕ್ಕೆ ಬೆಂಕಿ: ಕನ್ನಡ ದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಜಿ ಸಿಎಂ ಹೆಚ್​​ಡಿಕೆ ಆಗ್ರಹ

By

Published : Dec 16, 2021, 2:04 PM IST

ಬೆಂಗಳೂರು: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ಕರ್ನಾಟಕ ಮತ್ತು ಕನ್ನಡಿಗರನ್ನು ಕೆಣಕಿರುವ ಎಂಇಎಸ್‌ ಪುಂಡರ ವಿರುದ್ಧ ಕಠಿಣವಾಗಿ ವರ್ತಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ ಎಂದಿದ್ದು, ಕೊಲ್ಲಾಪುರದಲ್ಲಿ ನಮ್ಮ ಧ್ವಜ ದಹನ ಮಾಡಿರುವುದು ಅತ್ಯಂತ ನೀಚತನದ ಪರಮಾವಧಿ. ಕನ್ನಡ ದ್ರೋಹಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ವರ್ತಿಸಬೇಕು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ ಎಂದಿದ್ದಾರೆ.

ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರ್ಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಒಂದು ವೇಳೆ ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಎಂದು ಹೆಚ್​​ಡಿಕೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿ ಸೋಲಿಗೆ ಕಾಂಗ್ರೆಸ್, ಬಿಜೆಪಿ ನಾಯಕರ 'ಗೌಪ್ಯ ಸಭೆ' ಕಾರಣ: ಲಖನ್ ಜಾರಕಿಹೊಳಿ‌

ABOUT THE AUTHOR

...view details