ಬೆಂಗಳೂರು: ಸೆಪ್ಟೆಂಬರ್ 17 ರಿಂದ 19 ರವರೆಗೆ ಮೂರು ದಿನಗಳ ಕಾಲ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೈಸೂರು, ಶಿವಮೊಗ್ಗ, ದಾವಣಗೆರೆ ಪ್ರವಾಸಕ್ಕೆ ತೆರಳುತ್ತಿದ್ದು, ಮೈಸೂರಿನಲ್ಲೇ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮೈಸೂರಿಗೆ ತೆರಳಲಿರುವ ಮಾಜಿ ಸಿಎಂ ಯಡಿಯೂರಪ್ಪ 11ಗಂಟೆಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. 12ಗಂಟೆಗೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಮೋದಿ ಯುಗ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಅಲ್ಲಿಯೇ ಲಸಿಕಾಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3:00 ಗಂಟೆಗೆ ಮೈಸೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದು,ರಾತ್ರಿ 8 ಗಂಟೆಗೆ ಶಿವಮೊಗ್ಗ ತಲುಪಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಸೆಪ್ಟೆಂಬರ್ 18 ರ ಶನಿವಾರ ಬೆಳಗ್ಗೆ ಶಿವಮೊಗ್ಗದಲ್ಲಿ ನಡೆಯಲಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ.
ಸೆ.17 ರಿಂದ ಮೂರು ದಿನಗಳ ಕಾಲ ಮಾಜಿ ಸಿಎಂ ಬಿಎಸ್ವೈರಿಂದ ಜಿಲ್ಲಾ ಪ್ರವಾಸ..!
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮೈಸೂರಿಗೆ ತೆರಳಲಿರುವ ಮಾಜಿ ಸಿಎಂ ಯಡಿಯೂರಪ್ಪ 11ಗಂಟೆಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ.12ಗಂಟೆಗೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಮೋದಿ ಯುಗ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ನಂತರ ಅಲ್ಲಿಯೇ ಲಸಿಕಾಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾ
ಸಂಜೆ 4.30 ಕ್ಕೆ ದಾವಣಗೆರೆಗೆ ಪ್ರವಾಸ ಕೈಗೊಳ್ಳಲಿದ್ದು, ಸಂಜೆ 7 ಗಂಟೆಗೆ ಅಪೂರ್ವ ರೆಸಾರ್ಟ್ನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಂದು ರಾತ್ರಿ ಜಿಎಂಐಟಿ ಗೆಸ್ಟ್ ಹೌಸ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ಬೆಳಗ್ಗೆ 10.30 ದಾವಣಗೆರೆಯ ತ್ರಿಶೂಲ್ ಕಲಾ ಭವನದಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದು, 12:30 ಕ್ಕೆ ದಾವಣಗೆರೆಯಿಂದ ಹೊರಟು ಸಂಜೆ 4ಗಂಟೆಗೆ ಬೆಂಗಳೂರು ತಲುಪಲಿದ್ದಾರೆ.
ಇದನ್ನು ಓದಿ:ಸಿದ್ದರಾಮಯರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ: ಮಾಜಿ ಸಿಎಂ ಬಿಎಸ್ವೈ ಗುಡುಗು