ಬೆಂಗಳೂರು:ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತವಾಗಿದ್ದು, ಎರಡೂ ಕ್ಷೇತ್ರಗಳಲ್ಲೂ ಎರಡೆರಡು ದಿನ ಪ್ರಚಾರ ನಡೆಸುತ್ತೇನೆ, ಪಕ್ಷ ಬಯಸಿದಲ್ಲಿ ಇನ್ನು ಹೆಚ್ಚು ದಿನ ಪ್ರಚಾರ ನಡೆಸಲು ಸಿದ್ದನಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕಾವೇರಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರದಿಂದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇನೆ. ಎರಡೂ ಕಡೆ ಎರಡೆರಡು ದಿನ ಇರುತ್ತೇನೆ. ಅಗತ್ಯವಿದ್ದರೆ ಮತ್ತೆ ಒಂದೊಂದು ದಿನ ಹೋಗುತ್ತೇನೆ. ಒಟ್ಟಿನಲ್ಲಿ ಎರಡೂ ಕ್ಷೇತ್ರಗಳನ್ನು ನಾವು ಗೆಲ್ಲಬೇಕು. ನೂರಕ್ಕೆ ನೂರರಷ್ಟು ನಾವು ಎರಡೂ ಕ್ಷೇತ್ರ ಗೆಲ್ಲುತ್ತೇವೆ ಎಂದರು.