ಕರ್ನಾಟಕ

karnataka

ETV Bharat / city

Bitcoin Scam : ಪ್ರಧಾನಿ ಮೋದಿ ಇತ್ತೀಚೆಗೆ ಅಮೆರಿಕಕ್ಕೆ ಹೋಗಿರದಿದ್ದರೆ ಬಹುಶಃ ಹಗರಣ ಬೆಳಕಿಗೆ ಬರುತ್ತಿರಲಿಲ್ಲ: ಹೆಚ್​ಡಿಕೆ

ನರೇಂದ್ರ ಮೋದಿ ಅವರು ಮೌನವಾಗಿದ್ದಾರೆ ಎಂದರೆ ಹಗರಣವನ್ನು ಮುಚ್ಚಿ ಹಾಕಲು ಹೊರಟಿದ್ದಾರೆ ಅಂತಾ ಹೇಳುವುದಕ್ಕೆ ಆಗುವುದಿಲ್ಲ. ಅಮೆರಿಕದಲ್ಲಿ ಅವರಿಗೆ ಆಗಿರುವ ಮುಜುಗರವನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡದೇ ಇದ್ದಿದ್ದರೆ ಬಹುಶಃ ಬಿಟ್ ಕಾಯಿನ್ ಹಗರಣ (Karnataka Bitcoin Scam) ಬೆಳಕಿಗೆ ಬರುತ್ತಿರಲಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು..

ಮಾಜಿ ಸಿಎಂ ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ

By

Published : Nov 13, 2021, 6:59 PM IST

Updated : Nov 13, 2021, 10:25 PM IST

ಬೆಂಗಳೂರು :ಪ್ರಧಾನಿ ನರೇಂದ್ರ ಮೋದಿ(PM Narendra Modi US tour) ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡದೇ ಇದ್ದಿದ್ದರೆ ಬಹುಶಃ ಬಿಟ್ ಕಾಯಿನ್ ಹಗರಣ (Karnataka Bitcoin Scam) ಬೆಳಕಿಗೆ ಬರುತ್ತಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಅವರು ಹೇಳಿದರು.

ಅಮೆರಿಕದಲ್ಲಿ ಪ್ರಧಾನಿ ಮೋದಿಗೆ ಮುಜುಗರ :ಜನತಾ ಪರ್ವ 1.0 ಎರಡನೇ ಹಂತದ ಕಾರ್ಯಾಗಾರ 'ಜನತಾ ಸಂಗಮ'ದ ವೇಳೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಮೌನವಾಗಿದ್ದಾರೆ ಎಂದರೆ ಹಗರಣವನ್ನು ಮುಚ್ಚಿ ಹಾಕಲು ಹೊರಟಿದ್ದಾರೆ ಅಂತಾ ಹೇಳುವುದಕ್ಕೆ ಆಗುವುದಿಲ್ಲ. ಅಮೆರಿಕದಲ್ಲಿ ಅವರಿಗೆ ಆಗಿರುವ ಮುಜುಗರವನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದರು.

ಬಿಟ್‌ ಕಾಯಿನ್‌ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿರುವುದು..

ಅಮೆರಿಕದಲ್ಲಿ ಪ್ರಧಾನಿ (PM Modi) ಅವರಿಗೆ ಕೆಲ ತನಿಖಾ ಸಂಸ್ಥೆಗಳ ಮುಖ್ಯಸ್ಥರು ಬಿಟ್ ಕಾಯಿನ್ ಹಗರಣದ (Karnataka Bitcoin Scam) ವಿವರ ನೀಡಿದ್ದಾರೆ. ಅಲ್ಲಿ ಅವರಿಗೆ ಕಸಿವಿಸಿ ಆಗಿರುವುದು ನಿಜ. ಹೀಗಾಗಿ, ಪ್ರಧಾನಿ ಅವರು ಮೌನವಾಗಿದ್ದರೂ ಇಡೀ ಹಗರಣವನ್ನು ಸೂಕ್ಷ್ಮವಾಗಿ ಗಮನಿಸ್ತಿದ್ದಾರೆ ಎಂದು ಹೇಳಿದರು.

58,000 ಕೋಟಿ ರೂ. ಅವ್ಯವಹಾರ! :ಬಿಟ್ ಕಾಯಿನ್ ಪ್ರಕರಣ (Karnataka Bitcoin Scam) ಕಳೆದ 15 ದಿನಗಳಿಂದ ಸದ್ದು ಮಾಡುತ್ತಿದೆ. ಸಾರ್ವಜನಿಕವಾಗಿ ಆರೋಪ-ಪ್ರತ್ಯಾರೋಪ ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ನಡೆಯುತ್ತಿರುವುದನ್ನು ಗಮನಿಸುತ್ತಿದ್ದೇನೆ.

ಸೂಕ್ಷ್ಮ ವಿಚಾರಗಳ ಬಗ್ಗೆ ಜವಾಬ್ದಾರಿಯುತವಾಗಿ ಮಾತನಾಡುವಂತೆ ನಾಯಕರಿಗೆ ಹೇಳಲು ಬಯಸುತ್ತೇನೆ. ನಾನು ಹಾಗೆ ಮಾತನಾಡಲು ಬಯಸುವುದಿಲ್ಲ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

58,000 ಕೋಟಿ ರೂ. ಅವ್ಯವಹಾರ ಆಗಿದೆ ಅಂತಾ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದೆ. ನನ್ನಲ್ಲಿ ಇರುವ ಮಾಹಿತಿ ಪ್ರಕಾರ ಶ್ರೀಕಿ (Hacker Srikirishna alias Sriki) ಎಂಬ ಯುವಕನನ್ನು ಎಂಟರಿಂದ ಹತ್ತು ಬಾರಿ ಬಂಧನ ಮಾಡಲಾಗಿದೆ. 2020ರ ನವೆಂಬರ್‌ನಿಂದ ಎಂಟ್ಹತ್ತು ಬಾರಿ ಪೊಲೀಸರು ಅರೆಸ್ಟ್ ಮಾಡಿ ಬಿಡುಗಡೆ ಮಾಡಿದ್ದು ಆಗಿದೆ. ಇನ್ನು ಹದಿನೈದು ದಿನ ಸಮಯ ಕೊಡಿ, ಈ ಹಗರಣದ ಬಗ್ಗೆ ನಾನೇ ಪೂರ್ಣ ಮಾಹಿತಿ ಕೊಡುತ್ತೇನೆ ಎಂದರು.

ಕಾಂಗ್ರೆಸ್ ತನಿಖೆ ಹಾದಿ ತಪ್ಪಿಸುವುದು ಬೇಡ :ನಾನು ಈಗಾಗಲೇ ಜನ್​ಧನ್ ಖಾತೆಗಳಿಂದ ಹಣ ಎತ್ತಿರುವುದನ್ನು ಕೂಡ ಹೇಳಿದ್ದೇನೆ. ಈ ಬಗ್ಗೆ ಕೂಡ ಕೇಂದ್ರ ಗಂಭೀರವಾಗಿದೆ ಎನ್ನುವುದು ನನ್ನ ಭಾವನೆ. ಸುಖಾಸುಮ್ಮನೆ ಕಾಂಗ್ರೆಸ್ ನಾಯಕರು ತನಿಖೆ (Karnataka Bitcoin Scam Investigation) ನಡೆಯುತ್ತಿರುವ ಸಂದರ್ಭದಲ್ಲಿ ಆ ತನಿಖೆಯ ಹಾದಿ ತಪ್ಪಿಸುವುದು ಬೇಡ. ಅದಕ್ಕೆ ಅವರು ಕಾರಣರಾಗುವುದು ಬೇಡ ಎಂದು ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಕಿವಿಮಾತು ಹೇಳಿದರು.

ನಿಖರವಾಗಿ ಯಾವ ರಾಜಕೀಯ ಮುಖಂಡರಿಗೆ ಅಥವಾ ಅಧಿಕಾರಿಗೆ ಹಣ ವರ್ಗಾವಣೆ ಆಗಿದೆ ಎಂಬ ಬಗ್ಗೆ ಕಾಂಗ್ರೆಸ್ ನಾಯಕರು ದಾಖಲೆ ನೀಡುವುದು ಸೂಕ್ತ. ಆಗ ಜನರಿಗೂ ಸರಿಯಾದ ಮಾಹಿತಿ ಸಿಕ್ಕಿದಂತೆ ಆಗುತ್ತದೆ. ಈ ಹಗರಣದಿಂದ ಸಾರ್ವಜನಿಕರಲ್ಲೂ ಆತಂಕದ ಜತೆಗೆ ನೂರಾರು ಪ್ರಶ್ನೆಗಳೂ ಉಂಟಾಗಿವೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಯುಬಿ ಸಿಟಿ ಘಟನೆ ನೆನಪಿಸಿದ ಹೆಚ್​ಡಿಕೆ :2016 ರಿಂದಲೇ ಬಿಟ್ ಕಾಯಿನ್ ದಂಧೆ (Karnataka Bitcoin Scam) ಪ್ರಾರಂಭ ಆಗಿದೆ ಅಂತಾ ಮಾಹಿತಿ ಇದೆ. 2018ರ ಫೆಬ್ರವರಿಯಲ್ಲಿ ಯುಬಿ ಸಿಟಿಯಲ್ಲಿ (UB City) ಹಲ್ಲೆಯ ಘಟನೆ ನಡೆದಿತ್ತು. ಅದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಂಘರ್ಷ ಅಲ್ಲ ಅಂತಾ ಆಗಲೇ ನಾನು ಹೇಳಿದ್ದೆ.

ಆಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಆ ಘಟನೆ ನಡೆದ ಸಂದರ್ಭದಲ್ಲಿ ಶ್ರೀಕಿ ಕೂಡ ಅಲ್ಲಿಯೇ ಇದ್ದ ಎನ್ನುವುದು ಗೊತ್ತು. ಆಗ ಕಾಂಗ್ರೆಸ್ ಕೈಯ್ಯಲ್ಲೇ ಅಧಿಕಾರ ಇತ್ತಲ್ಲ, ಆಗ ಯಾಕೆ ಶ್ರೀಕಿಯನ್ನು ಬಂಧಿಸಲಿಲ್ಲ? ಆಗ ಪಶ್ಚಿಮ ಬಂಗಾಳದಿಂದ ಒಬ್ಬ ಆರೋಪಿಯನ್ನು ಬಂಧಿಸಿ ಕರೆ ತರಲಾಗಿತ್ತು ಎಂದು ಎಂದು ಕುಮಾರಸ್ವಾಮಿ (Former CM HD Kumaraswamy) ಹೇಳಿದರು.

ಬಿಜೆಪಿಯವರದ್ದು ಯಾವ ರಾಜಕಾರಣ?:ಜೆಡಿಎಸ್‍ ಕುಟುಂಬ ರಾಜಕಾರಣ ಎಂಬ ಬಿಜೆಪಿ ಆರೋಪಕ್ಕೆ ಕಿಡಿಕಾರದ ಅವರು, ಬಿಜೆಪಿಯವರದ್ದು ಯಾವ ರಾಜಕಾರಣ? ನಾವು ಹಿಂಬಾಗಿಲಿನ ರಾಜಕಾರಣ ಮಾಡಿಲ್ಲ. ಶಾಸಕ ಅಪ್ಪಚ್ಚು ರಂಜನ್ ಸಹೋದರ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಹೋದರ ಪರಿಷತ್ ಅಭ್ಯರ್ಥಿಗಳು. ಉದಾಸಿ ಕುಟುಂಬ, ಯಡಿಯೂರಪ್ಪ (Former CM BS Yedyurappa) ಕುಟುಂಬ ಇಲ್ಲವೇ? ಹೀಗೆ ಬಿಜೆಪಿಯವರು ಕ್ಷುಲ್ಲಕ ವಿಚಾರ ಮಾತಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.

ಪರ್ಸಂಟೇಜ್ ರಾಜಕಾರಣ ಮಾಡಿಲ್ಲ :ನಾವು ಹೊಡೆಯುವ ಪರ್ಸಂಟೇಜ್ ರಾಜಕಾರಣ ಮಾಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಾಳಿಗೆ ತೂರಿ ಶಾಸಕರನ್ನು ಕೊಂಡುಕೊಂಡು ರಾಜಕಾರಣ ಮಾಡಿದ್ದಾರೆ. ಸರ್ಕಾರ ಬದಲಾಯಿಸುವ ರಾಜಕಾರಣಕ್ಕೆ ಏನಂತಾ ಹೆಸರು ಇಡುತ್ತಾರೆ. ನೀವೇ (ಬಿಜೆಪಿ) ಅದಕ್ಕೂ ಹೆಸರಿಟ್ಟುಬಿಡಿ ಎಂದು ಕುಟುಕಿದರು.

ಹೌದು ನಮ್ಮ ಶಕ್ತಿ ಕುಂದಿದೆ :ಶಾಸಕ ಶಿವಲಿಂಗೇಗೌಡ (MLA Shivalinga Gowda) ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ಹೌದು ನಮ್ಮ ಶಕ್ತಿ ಕುಂದಿದೆ. ಅವರು ಮೂರು ಬಾರಿ ಶಾಸಕರಾಗಿದ್ದಾರೆ. ನಮ್ಮ ಅವಶ್ಯಕತೆ ಇರಲ್ಲ ಈಗ. ಅವರೇ ಗೆಲ್ಲುವಂತಹ ಶಕ್ತಿಯನ್ನು ಬೆಳೆಸಿಕೊಂಡಿದ್ದಾರೆ. ಆದ್ದರಿಂದ ಈ ರೀತಿ ಹೇಳ್ತಾರೆ, ತಪ್ಪೇನಿದೆ. ಅವರು ಹೇಳಿರೋದರಲ್ಲಿ ತಪ್ಪೇನಿಲ್ಲ ಎಂದರು.

MLC ಸಂದೇಶ್ ನಾಗರಾಜ್ ಪಕ್ಷ ಬಿಡುವ ವಿಚಾರ :ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಪಕ್ಷ ಬಿಡುವ ವಿಚಾರವಾಗಿ ಮಾತನಾಡಿದ ಅವರು, ಬಹಳ ಸಂತೋಷ . ನಂಬಿಕೆ ಇಲ್ಲದ ಪಕ್ಷದಲ್ಲಿ ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದು, ಈ ಹಿಂದೆ ನಂಬಿಕೆ ಇರುವಂಥವರ ಜೊತೆಯಲ್ಲಿ ಇದ್ರಲ್ಲಾ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ರು. ನಂಬಿಕೆ ಇಲ್ಲದ ಪಕ್ಷದ ಜೊತೆ ಇದ್ದು ಎರಡು ಬಾರಿ ಎಂಎಲ್‌ಸಿ ಆದ್ರು. ಈಗ ನಂಬಿಕೆ ಇರುವವರನ್ನು ಹುಡುಕಿಕೊಂಡು ಹೊರಟವರೆ, ಒಳ್ಳೆದಾಗಲಿ ಎಂದು ತಿರುಗೇಟು ನೀಡಿದರು.

Last Updated : Nov 13, 2021, 10:25 PM IST

ABOUT THE AUTHOR

...view details