ಕರ್ನಾಟಕ

karnataka

ETV Bharat / city

ಶಿಕ್ಷಕರನ್ನೂ 'ಕೊರೊನಾ ವಾರಿಯರ್ಸ್' ಎಂದು ಪರಿಗಣಿಸಿ, 50 ಲಕ್ಷ ಪರಿಹಾರ ನೀಡಿ: ಹೆಚ್​ಡಿಕೆ - ಬೆಂಗಳೂರು

ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ಶಿಕ್ಷಕರನ್ನು ನಿಯೋಜಿಸಿದ ಸರ್ಕಾರವೇ ಅವರ ಕೊರೊನಾ ಸಾವುಗಳ ಬಗ್ಗೆಯೂ ಸಂಪೂರ್ಣ ಹೊಣೆ ಹೊರಬೇಕು. ಅಲ್ಲದೆ ಮೃತರಾದ ಎಲ್ಲಾ ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸುವಂತೆ ಹೆಚ್​​ಡಿಕೆ ಆಗ್ರಹಿಸಿದ್ದಾರೆ.

HD Kumaraswamy
ಹೆಚ್​ಡಿಕೆ

By

Published : May 24, 2021, 11:12 AM IST

ಬೆಂಗಳೂರು: ಶಿಕ್ಷಕರನ್ನು ಕೊರೊನಾ ವಾರಿಯರ್ಸ್​ ಎಂದು ಘೋಷಿಸಿ ಅವರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಚುನಾವಣಾ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದೆಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ ಎಂದಿದ್ದಾರೆ.

ಶಿಕ್ಷಕರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಹೆಚ್​ಡಿಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ತಗ್ಗಿದ ಕೊರೊನಾ ಅಬ್ಬರ: 5,722 ಹೊಸ ಕೇಸ್​ ಪತ್ತೆ

ABOUT THE AUTHOR

...view details