ಕರ್ನಾಟಕ

karnataka

ETV Bharat / city

ನನ್ನ ಪ್ರಶ್ನೆಗೆ ಉತ್ತರಿಸಲಾಗದ ಆರ್​ಎಸ್​ಎಸ್​ ಬಿಜೆಪಿಗರನ್ನು ಛೂ ಬಿಟ್ಟಿದೆ: ಸಿದ್ದರಾಮಯ್ಯ - ಆರ್​ಎಸ್​ಎಸ್​ ವಿರುದ್ಧ ಸಿದ್ದರಾಮಯ್ಯ ಟ್ವೀಟಾಸ್ತ್ರ

ಆರ್​ಎಸ್​ಎಸ್​ ಸಂಘಟನೆಯ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ. ಸರಣಿ ಪ್ರಶ್ನೆಗಳನ್ನು ಕೇಳುವ ಮೂಲಕ ಸಂಘಟನೆಯನ್ನು ಟೀಕಿಸಿದ್ದಾರೆ.

former-cm-siddaramaiah-again-criticize-on-rss
ಸಿದ್ದರಾಮಯ್ಯ

By

Published : May 30, 2022, 10:25 PM IST

ಬೆಂಗಳೂರು:ಆರ್​ಎಸ್​ಎಸ್​ ಸಂಘಟನೆ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಹರಿಹಾಯ್ದಿರುವ ಅವರು, ನಿಮ್ಮ ಸಂಘದಲ್ಲಿ ಒಂದು ಜಾತಿಯ ಪದಾಧಿಕಾರಿಗಳು ಮಾತ್ರ ಯಾಕಿದ್ದಾರೆ? ದಲಿತರು, ಹಿಂದುಳಿದವರು ಸೇರಿದಂತೆ ಬೇರೆ ಜಾತಿಗಳಿಗೆ ಯಾಕೆ ಅವಕಾಶ ಇಲ್ಲ? ಇಂತಹದ್ದೊಂದು ಸರಳ ಪ್ರಶ್ನೆಗೆ ಆರ್​ಎಸ್​ಎಸ್​​ನಲ್ಲಿ ಉತ್ತರ ಇಲ್ಲ ಎನ್ನುವುದೇ ಈ ಸಂಘಟನೆಯ ಡೋಂಗಿತನಕ್ಕೆ ಸಾಕ್ಷಿ ಎಂದು ಟೀಕಿಸಿದ್ದಾರೆ.

ನನ್ನ ಸರಳ ಪ್ರಶ್ನೆಗೆ ಉತ್ತರಿಸಲಾಗದ ಆರ್​ಎಸ್​ಎಸ್, ರಾಜ್ಯ ಬಿಜೆಪಿಯ ಕೂಗುಮಾರಿಗಳನ್ನು ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಲು ಛೂ ಬಿಟ್ಟಿದೆ. 97 ವರ್ಷಗಳ ಇತಿಹಾಸವಿರುವ ಆರ್​ಎಸ್​ಎಸ್ ಸರಳ ಪ್ರಶ್ನೆಗೆ ಉತ್ತರಿಸಲಾಗದಷ್ಟು ದುರ್ಬಲ ಸಂಘಟನೆಯೇ? ಎಂದು ಕೇಳಿದ್ದಾರೆ.

ಶಾಖೆಗೆ ಹೋಗಿ ಏನು ಕಲಿಯಬೇಕು:ಬಿಜೆಪಿಯ ಒಬ್ಬ ನಾಯಕರು ಆರ್​ಎಸ್​ಎಸ್ ಶಾಖೆಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಇನ್ನೊಬ್ಬರು ಆರ್​ಎಸ್​ಎಸ್ ಪುಸ್ತಕ ಓದಿ ಎಂದು ಸಲಹೆ ನೀಡಿದ್ದಾರೆ. ಅಲ್ಲಿಗೆ ಹೋಗಿ, ಓದಿ ಏನನ್ನು ಕಲಿಯುವುದು? ಶೇ 40ರಷ್ಟು ಕಮಿಷನ್ ಹೊಡೆಯುವುದಾ? ದುಡ್ಡು ಪಡೆದು ಪಕ್ಷಾಂತರ ಮಾಡುವುದಾ? ಎಂದು ಪ್ರಶ್ನಿಸಿದ್ದಾರೆ.

ನನ್ನ ಮೇಲೆ ವಾಗ್ದಾಳಿ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರ ಮಾತುಗಳೇ, ಆರ್​ಎಸ್​ಎಸ್ ತನ್ನ ಸ್ವಯಂಸೇವಕರಿಗೆ ಕಲಿಸಿಕೊಡುವ ಸಂಸ್ಕಾರ- ಸಂಸ್ಕೃತಿ ಏನು ಎನ್ನುವುದನ್ನು ಸೂಚಿಸುತ್ತದೆ. ಆರ್​ಎಸ್​ಎಸ್ ಶಾಖೆಗಳಿಗೆ ಹೋದರೆ ಏನಾಗುತ್ತದೆ ಎನ್ನುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ ಅವರೇ ಜೀವಂತ ಉದಾಹರಣೆ ಎಂದು ಹೇಳಿದ್ದಾರೆ.

ಉಳಿದವರು ಅಸ್ಪೃಶ್ಯರೇಸಂಸ್ಕೃತಿ, ಸಂಸ್ಕಾರ, ಸಚ್ಛಾರಿತ್ರ್ಯದಂತಹ ಮೌಲ್ಯಗಳಿಗೂ, ನಿತ್ಯ ಶಬ್ದಭೇದಿ ಮಾಡುತ್ತಿರುವ ಕಟೀಲ್ ಅವರಿಗೂ ಏನಾದರೂ ಸಂಬಂಧವಿದೆಯೇ? ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗೌರವಾನ್ವಿತ ನಾಯಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತಿದ್ದೇನೆ. ಹಿಂದುಗಳೆಲ್ಲ ಒಂದು ಎನ್ನುವ ನಿಮ್ಮ ಸಂಘದ ಉನ್ನತ ಪದಾಧಿಕಾರ ಒಂದು ಜಾತಿಗೆ ಯಾಕೆ ಸೀಮಿತವಾಗಿದೆ. ಉಳಿದ ಜಾತಿಗಳು ಯಾಕೆ ಅಸ್ಪೃಶ್ಯವಾಗಿವೆ. ದಯವಿಟ್ಟು ಉತ್ತರಿಸಿ ಎಂದು ಬರೆದುಕೊಂಡಿದ್ದಾರೆ.

ಓದಿ:ರಮೇಶ್ ಜಾರಕಿಹೊಳಿ ಸಿಡಿ ಕೇಸ್: ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ ಹೈಕೋರ್ಟ್

For All Latest Updates

TAGGED:

ABOUT THE AUTHOR

...view details