ಬೆಂಗಳೂರು: ಎಫ್ಕೆಸಿಸಿಐ ಮಾಜಿ ಅಧ್ಯಕ್ಷ ಕೆ.ಎನ್. ಜಯಲಿಂಗಪ್ಪ ಇಂದು ನಿಧನರಾಗಿದ್ದು, ಸಂಸ್ಥೆ ಸೂಚಿಸಿದೆ.
ಎಫ್ಕೆಸಿಸಿಐ ಮಾಜಿ ಅಧ್ಯಕ್ಷ ಕೆ.ಎನ್. ಜಯಲಿಂಗಪ್ಪ ನಿಧನ - Bangalore News
ಎಫ್ಕೆಸಿಸಿಐ ಮಾಜಿ ಅಧ್ಯಕ್ಷ ಕೆ.ಎನ್. ಜಯಲಿಂಗಪ್ಪ ಇಂದು ನಿಧನರಾಗಿದ್ದು, ಅವರ ಅಗಲಿಕೆಯಿಂದ ಕುಟುಂಬ ಸದಸ್ಯರಿಗೆ ಮಾತ್ರವಲ್ಲದೆ ನಮ್ಮ ಸಂಸ್ಥೆಗೂ ಸಹ ತುಂಬಲಾರದ ನಷ್ಟವಾಗಿದೆ ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ಧನ್ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ಧನ್, ಅವರ ಅಗಲಿಕೆಯಿಂದ ಕುಟುಂಬ ಸದಸ್ಯರಿಗೆ ಮಾತ್ರವಲ್ಲದೆ ನಮ್ಮ ಸಂಸ್ಥೆಗೂ ಸಹ ತುಂಬಲಾರದ ನಷ್ಟವಾಗಿದೆ. ಕೆ.ಎನ್. ಜಯಲಿಂಗಪ್ಪ ಅವರು 2002-2003ರ ಅವಧಿಯಲ್ಲಿ ಸಂಸ್ಥೆಯ ಅಧ್ಯಕ್ಷರಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಹಾಗೂ ಸಭೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಅವರು ಅತ್ಯಂತ ಅನುಭವಿ ಹಾಗೂ ಹಿರಿಯ ಸದಸ್ಯರಾಗಿ ತಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡುತ್ತಿದ್ದರು.
ಅಖಿಲ ಭಾರತ ವೀರಶೈವ ಮಹಾಸಭಾ ಖಜಾಂಚಿ ಮತ್ತು ಸರ್ಪಭೂಷಣ ಮಠದ ಅಧ್ಯಕ್ಷರಾಗಿಯೂ ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಕಾಸಿಯಾ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಶ್ರಮಿಸಿದ ಕೀರ್ತಿ ಅವರದು. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ ಎಂದು ಸಂತಾಪ ಸೂಚಿಸಿದ್ದಾರೆ.