ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಮಾಜಿ ಸಚಿವ ಡಿ.ಎನ್.ಜೀವರಾಜ್ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಡಿ.ಎನ್.ಜೀವರಾಜ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಸಚಿವ ಡಿಎನ್ ಜೀವರಾಜ್ ನೇಮಕ! - ಬೆಂಗಳೂರು
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾಜಿ ಸಚಿವ ಡಿಎನ್ ಜೀವರಾಜ್ ಅವರನ್ನು ರಾಜಕೀಯ ಕಾರ್ಯದರ್ಶಿಯನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಎಸ್.ಆರ್ ವಿಶ್ವನಾಥ್ ಅವರಿಂದ ಈ ಹುದ್ದೆ ತೆರವಾಗಿತ್ತು.
![ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಸಚಿವ ಡಿಎನ್ ಜೀವರಾಜ್ ನೇಮಕ! Former Minister D.N. Jeevaraj Selected As a CM Political Secretary](https://etvbharatimages.akamaized.net/etvbharat/prod-images/768-512-9917050-thumbnail-3x2-jeevaraj.jpg)
ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಸಚಿವ ಡಿಎನ್ ಜೀವರಾಜ್ ನೇಮಕ!
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಸ್ವತಃ ಜೀವರಾಜ್‌ಗೆ ಕರೆ ಮಾಡಿ ರಾಜಕೀಯ ಕಾರ್ಯದರ್ಶಿಯಾಗಿ ಹುದ್ದೆ ನೀಡಿರುವ ಬಗ್ಗೆ ತಿಳಿಸಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಮಾಜಿ ಸಚಿವ ಜೀವರಾಜ್ ಅವರು ಮೊದಲಿನಿಂದಲೂ ಬಿ.ಎಸ್ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತಿಚೇಗೆ ಎಸ್.ಆರ್ ವಿಶ್ವನಾಥ್ ಅವರಿಂದ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ತೆರವಾಗಿತ್ತು. ತೆರವಾಗಿದ್ದ ಸ್ಥಾನಕ್ಕೆ ಜೀವರಾಜ್‌ರನ್ನು ನೇಮಿಸಿದ್ದಾರೆ.