ಕರ್ನಾಟಕ

karnataka

ETV Bharat / city

ಗಲಭೆ ನಿಂತ ಬಳಿಕ ರಾಜಕಾರಣಿಗಳ ಟ್ವೀಟ್‌ ಸಮರ: ಬಿ.ಎಲ್‌.ಸಂತೋಷ್‌ಗೆ ಸಿದ್ದರಾಮಯ್ಯ ಟಾಂಗ್ - ಬೆಂಗಳೂರು ಸುದ್ದಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್​ ಮೂಲಕ ಕಿಡಿ ಕಾರಿದ್ದಾರೆ.

former minister Siddaramaiah  tweet
ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ: ಸಂತೋಷ್​ಗೆ ಸಿದ್ದರಾಮಯ್ಯ ಟಾಂಗ್

By

Published : Aug 13, 2020, 10:05 PM IST

ಬೆಂಗಳೂರು:ತಮ್ಮ ಪಕ್ಷದ ದಲಿತ ಶಾಸಕನ ಮೇಲೆ ದಾಳಿಯಾದ ಸಂದರ್ಭದಲ್ಲಿಯೂ ಸಿದ್ದರಾಮಯ್ಯ ಮೌನವಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ಟೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ.

ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ: ಸಂತೋಷ್​ಗೆ ಸಿದ್ದರಾಮಯ್ಯ ಟಾಂಗ್

ಬಿ.ಎಲ್.ಸಂತೋಷ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ಸಂತೋಷ್ ಅವರು 'ಹಿಂದುತ್ವ'ದ ಜಪ ನಿಲ್ಲಿಸಿ 'ದಲಿತ' ಜಪ ಶುರು ಮಾಡಿದ್ದಾರೆ. 'ಹಿಂದು-ಒಂದು' ಎಂದು ಭಜನೆ ಮಾಡ್ತೀರಿ, ಜಾತಿ ಮೂಲದ ತಾರತಮ್ಯ, ಶೋಷಣೆಗಳ ಜೊತೆ ಗುದ್ದಾಡಿ, ದಲಿತರೊಬ್ಬರು ಶಾಸಕರಾದರೂ ಅವರನ್ನು ದಲಿತರೆಂದು ಹಂಗಿಸುತ್ತೀರಿ. ನಿಮ್ಮನ್ನು ಕೂಡಾ ನಿಮ್ಮ ಜಾತಿಯಿಂದಲೇ ಕರೆಯೋಣವೇ? ಎಂದು ಪ್ರಶ್ನಿಸಿದ್ದಾರೆ.

ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ: ಸಂತೋಷ್​ಗೆ ಸಿದ್ದರಾಮಯ್ಯ ಟಾಂಗ್
ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ: ಸಂತೋಷ್​ಗೆ ಸಿದ್ದರಾಮಯ್ಯ ಟಾಂಗ್

ರಾಜ್ಯದಲ್ಲಿ ನಿಮ್ಮದೇ ಪಕ್ಷ ಅಧಿಕಾರದಲ್ಲಿರುವಾಗ ಒಬ್ಬ ದಲಿತ ಶಾಸಕನ ಮನೆಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗಿಲ್ಲ. ಇನ್ನು ಕೋಟ್ಯಂತರ ಸಂಖ್ಯೆಯ ಬಡ-ಅಸಹಾಯಕ ದಲಿತರ ಮನೆಗಳಿಗೆ ರಕ್ಷಣೆ ನೀಡಲು ಹೇಗೆ ಸಾಧ್ಯ? ಇದು ತಲೆತಗ್ಗಿಸುವಂತಹ ವೈಫಲ್ಯ ಎಂದು ನಿಮಗನ್ನಿಸುವುದಿಲ್ಲವೇ ಸಂತೋಷ್ ಅವರೇ? ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ. ಸತ್ತ ದನದ ಚರ್ಮ ಸುಲಿದಿದ್ದಕ್ಕೆ, ಗೋಮಾಂಸ ತಿಂದಿದ್ದಕ್ಕೆ, ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ, ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ ದಲಿತರ ಬೆನ್ನತ್ತಿ ಹಿಂಸಿಸಿ, ಸಾಯಿಸಿದ್ದು ಯಾರ ಆಡಳಿತದಲ್ಲಿ ಸಂತೋಷ್ ಅವರೇ? ಎಂದು ಕೇಳಿದ್ದಾರೆ.

ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ: ಸಂತೋಷ್​ಗೆ ಸಿದ್ದರಾಮಯ್ಯ ಟಾಂಗ್

ದಲಿತರು ನಾಯಿಗಳೆಂದು ತುಚ್ಛೀಕರಿಸಿದವರು, ಮೀಸಲಾತಿಯನ್ನು ವಿರೋಧಿಸುತ್ತಿರುವವರು, ಸಂವಿಧಾನವನ್ನು ಬದಲಾಯಿಸಬೇಕೆನ್ನುವವರು, ಡಾ.ಅಂಬೇಡ್ಕರ್ ಅವರನ್ನು ಅವಮಾನಿಸುವವರು ಯಾವ ಪಕ್ಷದವರು ಹೇಳಿ? ಇಂತಹ ಮನುಷ್ಯ ವಿರೋಧಿಗಳ ವಿರುದ್ಧ ನಿಮ್ಮ ಪಕ್ಷವೇನಾದರೂ ಕ್ರಮ ಕೈಗೊಂಡಿದೆಯೇ? ನಿಮ್ಮ ಕಾಲದಲ್ಲಿ ದಲಿತರ ಹತ್ಯೆ/ದೌರ್ಜನ್ಯ ದುಪ್ಪಟ್ಟಾಗಿದೆ ಎಂದು ಎನ್​ಸಿಆರ್ ವರದಿ ಹೇಳುತ್ತಿದೆ. ಹೀಗಿದ್ದರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯಿದೆಯನ್ನು ದುರ್ಬಲಗೊಳಿಸುವ ಹುನ್ನಾರ ನಡೆಸುತ್ತೀರಿ. ಇದು ನಿಮ್ಮ ದಲಿತರ ಮೇಲಿನ ಕಾಳಜಿಯಲ್ಲವೇ ಬಿ.ಎಲ್.ಸಂತೋಷ್ ಅವರೇ? ಎಂದಿದ್ದಾರೆ.

ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ: ಸಂತೋಷ್​ಗೆ ಸಿದ್ದರಾಮಯ್ಯ ಟಾಂಗ್

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಎಸ್ಸಿಪಿ-ಟಿಎಸ್ಪಿ ಯೋಜನೆಗೆ ನೀಡಿದ್ದ ಹಣ ರೂ.22,161 ಕೋಟಿ ಮಾತ್ರ. ನಮ್ಮ ಸರ್ಕಾರದ 5 ವರ್ಷಗಳಲ್ಲಿ ನೀಡಿದ್ದ ಹಣ ರೂ.88, 395 ಕೋಟಿ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿ ಈ ಯೋಜನೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರ್ತೀರಾ? ದಿವಂಗತ ಬಂಗಾರು ಲಕ್ಷ್ಮಣ್ ಅವರನ್ನು ನಿಮ್ಮ ಪಕ್ಷದ ಏಕೈಕ ಭ್ರಷ್ಟನೆಂಬ ರೀತಿಯಲ್ಲಿ ಬಲಿಗೊಟ್ಟಿದ್ದು ಯಾರು? ದಲಿತರು ಜಾಗೃತರಾಗಿದ್ದಾರೆ. ಹಿತೈಷಿಗಳು ಯಾರು, ಹಿತಶತ್ರುಗಳು ಯಾರು ಎನ್ನುವುದು ಅವರಿಗೆ ಗೊತ್ತಿದೆ. ಉರಿಯುವ ಮನೆಯಲ್ಲಿ ಇರಿಯುವ ಕೆಲಸ ಮಾಡ್ಬೇಡಿ ಎಂದು ಸಂತೋಷ್​ ಅವರಿಗೆ ತಾಕೀತು ಮಾಡಿದ್ದಾರೆ.

ABOUT THE AUTHOR

...view details