ಮಂಡ್ಯ :ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ, ಕಾವೇರಿ ಹೋರಾಟಗಾರರಾದ ಜಿ.ಮಾದೇಗೌಡ (92) ವಿಧಿವಶರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಮೊದಲಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾದೇಗೌಡರನ್ನು ಕೆ ಎಂ ದೊಡ್ಡಿಯಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಿ, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಚೇತರಿಸಿಕೊಳ್ಳುತ್ತಿದ್ದಾರೆಂದು ಆಸ್ಪತ್ರೆಯ ಜನರಲ್ ಫಿಜಿಷಿಯನ್ ಡಾ.ರಕ್ಷಿತ್ ಭಾರದ್ವಾಜ್ ತಿಳಿಸಿದ್ದರು.