ಬೆಂಗಳೂರು :ಪ್ರತಿ ವರ್ಷ ಬಾಬು ಜಗಜೀವನರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಂಯತಿ ಆಚರಣೆ ಮಾಡುತ್ತೇವೆ. ಇವರಿಬ್ಬರೂ ದೇಶದ ದೊಡ್ಡ ನಾಯಕರು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಬಣ್ಣಿಸಿದ್ದಾರೆ.
ಬಾಬು ಜಗಜೀವನರಾಮ್ ಅವರನ್ನು ಸ್ಮರಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ - ಬಾಬು ಜಗಜೀವನರಾಮ್ ಅವರನ್ನು ಸ್ಮರಿಸಿದ ಹೆಚ್ಡಿ ದೇವೇಗೌಡ
ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಬಾಬು ಜಗಜೀವನರಾಮ್ ಅವರ 113 ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭಾಗಿಯಾಗಿದ್ದರು. ಮಾಸ್ಕ್ ಧರಿಸಿಕೊಂಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವೇಗೌಡರು, ದೀಪ ಬೆಳಗಿಸಿ ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಬಾಬು ಜಗಜೀವನರಾಮ್ ಅವರ 113 ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತುಳಿತಕ್ಕೆ ಒಳಗಾದ ಸಮಾಜದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು. ದೇಶದಲ್ಲಿ ತುರ್ತು ಪರಿಸ್ಥಿತಿ ನಂತರದ ಸಮಯದಲ್ಲಿ ಜಗಜೀವನರಾಮ್ ಸೇರಿದಂತೆ ಅನೇಕರ ನಡುವೆ ಪ್ರಧಾನಿ ಸ್ಥಾನಕ್ಕಾಗಿ ಪೈಪೋಟಿ ನಡೆದಿತ್ತು. ಆ ವೇಳೆ ಬಾಬು ಜಗಜೀವನರಾಮ್ ಅವರನ್ನು ಪ್ರಧಾನಿ ಮಾಡಲು ನಿರ್ಧರಿಸಲಾಗಿತ್ತು. ಆದರೆ ಮೇಲ್ವರ್ಗದ ಜನರು ಇದಕ್ಕೆ ವಿರೋಧಿಸಿದರು. ಆ ವೇಳೆ ಮೊರಾರ್ಜಿ ದೇಸಾಯಿ ಪ್ರಧಾನಿ ಆದರು. ಬಳಿಕ ಪಕ್ಷ ಒಡೆದು ಹೋಯಿತು. ಬಳಿಕ ಜಗಜೀವನರಾಮ್ ನೇತೃತ್ವದಲ್ಲಿ ಚುನಾವಣೆ ನಡೆಸಿದೆವು ಎಂದು ಹಿಂದಿನ ದಿನಗಳನ್ನು ಮೆಲುಕು ಹಾಕಿದರು.
ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ಮಾತನಾಡಿ, ನಮ್ಮ ಪಕ್ಷದಿಂದ ಬಾಬು ಜಗಜೀವನರಾಮ್ ಜಯಂತಿ ಆಚರಣೆ ಮಾಡಿದ್ದೇವೆ. ಅವರು ದೇಶಕ್ಕಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಜಗಜೀವನರಾಮ್ ಅವರ ಕಾರ್ಯಕ್ರಮವನ್ನು ನಾವು ಮುಂದುವರೆಸಬೇಕು ಎಂದರು. ಮಾಸ್ಕ್ ಧರಿಸಿಕೊಂಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು, ದೀಪ ಬೆಳಗಿಸಿ ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಜೆಡಿಎಸ್ನ ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್, ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಸೇರಿ ಕೆಲವೇ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.