ಬೆಂಗಳೂರು : ಕೇಂದ್ರದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆರ್. ಎಲ್. ಜಾಲಪ್ಪನವರ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದೇವೇಗೌಡರು, ಆರ್.ಎಲ್. ಜಾಲಪ್ಪನವರು ಇಂದು ನಮ್ಮನ್ನಗಲಿದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವುಂಟಾಯಿತು ಎಂದು ಹೇಳಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬಕ್ಕೆ ಮತ್ತು ಅವರ ಅಪಾರ ಅಭಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿರಿ:ಮುತ್ಸದ್ದಿ ರಾಜಕಾರಣಿ ಆರ್.ಎಲ್.ಜಾಲಪ್ಪ ನಡೆದು ಬಂದ ಹಾದಿ..
ಹೆಚ್ಡಿಕೆ ಸಂತಾಪ :ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ್ದ, ರಾಜ್ಯ ಮತ್ತು ಕೇಂದ್ರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಆರ್.ಎಲ್.ಜಾಲಪ್ಪ ಅವರ ಅಗಲಿಕೆ ದುಃಖವುಂಟು ಮಾಡಿದೆ ಎಂದು ಹೇಳಿದ್ದಾರೆ. ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಅವರು, 1996ರಲ್ಲಿ ಶ್ರೀ ಹೆಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಜಾಲಪ್ಪ ಅವರಿಗೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.