ಕರ್ನಾಟಕ

karnataka

ETV Bharat / city

ಬೆಂಗಳೂರಿನಲ್ಲಿ ದರೋಡೆಗೆ ಸಂಚು ರೂಪಿಸಿದ್ದ ನಾಲ್ವರ ಬಂಧನ, ಓರ್ವ ಪರಾರಿ - ಡಿಸಿಪಿ ಸಂದೀಪ್ ಪಾಟೀಲ್

ಜೂನ್ 22ರ ರಾತ್ರಿ ರಾಜಧಾನಿಯ ಪಶ್ಚಿಮ ವಿಭಾಗದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್​ ಬಳಿ ಜನರನ್ನು ಅಡ್ಡಹಾಕಿ ದರೋಡೆಗೆ ಸಂಚು ಹಾಕಿದ್ದ ಇಬ್ಬರು ಬಾಲಕರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

Bangalore
ಬಂಧಿತ ಆರೋಪಿಗಳು

By

Published : Jun 25, 2021, 12:19 PM IST

ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಜನರನ್ನು ಅಡ್ಡಹಾಕಿ ದರೋಡೆಗೆ ಸಂಚು ಹಾಕಿದ್ದ ಇಬ್ಬರು ಬಾಲಕರು ಸೇರಿ ನಾಲ್ವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಓರ್ವ ಆರೋಪಿ ಖಾಕಿ ಕಣ್ಣತಪ್ಪಿಸಿ ಪರಾರಿಯಾಗಿದ್ದಾನೆ.

ಚಿಕ್ಕಗೊಲ್ಲರಹಟ್ಟಿ ದಾಸಪ್ಪ ಲೇಔಟ್​ನ ಪುಟ್ಟಸ್ವಾಮಿ (27), ಲಗ್ಗೆರೆಯ ಸತೀಶ (23) ಹಾಗೂ ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಜೂನ್ 22ರ ರಾತ್ರಿ ರಾಜಧಾನಿಯ ಪಶ್ಚಿಮ ವಿಭಾಗದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್​ನ 8ನೇ ಬ್ಲಾಕ್​ನ ರಸ್ತೆ ಪಕ್ಕದಲ್ಲಿ 5 ಮಂದಿ ಮೂರು ದ್ವಿಚಕ್ರ ವಾಹನಗಳನ್ನು ನಿಲ್ಲಿಸಿಕೊಂಡು ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಮುಂದಾಗಿರುವ ಬಗ್ಗೆ ಪೊಲೀಸರಿಗೆ ಖಚಿತ ಬಂದಿದೆ. ಕೂಡಲೇ ಅಲರ್ಟ್ ಆದ ಸಿಬ್ಬಂದಿ, ದಾಳಿ ನಡೆಸಿ ನಾಲ್ವರನ್ನು ಸ್ಥಳದಲ್ಲೇ ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ 39, 402 ಐಪಿಸಿ ಜೊತೆಗೆ ಕಲಂ 2513 [3] ಶಸ್ತ್ರಾಸ್ತ್ರ ಕಾಯ್ದೆ 1959 ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪಶ್ಚಿಮ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್, ಅನ್ನಪೂರ್ಣೇಶ್ವರಿ ಪೋಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಿ.ಎನ್.ಲೋಹಿತ್ ಹಾಗೂ ಸಿಬ್ಬಂದಿ ಈ ಪ್ರಕರಣದ ತನಿಖೆ ನಡಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯಾದ ಅಕ್ಷಿತ್ ಎನ್ನುವವನ ಜೊತೆ ಆರೋಪಿಗಳು ಸೇರಿಕೊಂಡು ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ಮೊಬೈಲ್‌ ಫೋನ್‌ಗಳನ್ನು ಕಳವು ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರಿಗೆ ಹೆದರಿಸಿ, ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡಿರುವುದಾಗಿ ಕೂಡ ಆರೋಪಿಗಳು ಬಾಯಿ ಬಿಟ್ಟಿರುವುದರಿಂದ ಸುಮಾರು 2,00,000 ರೂ. ಬೆಲೆಬಾಳುವ ವಿವಿಧ ಕಂಪನಿಗಳ 24 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಅನ್ನಪೂರ್ಣೇಶ್ವರಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:ಫಡ್ನವಿಸ್ ಭೇಟಿ ಸಫಲ: ರಮೇಶ್ ಜಾರಕಿಹೊಳಿ‌ಗೆ ಬಿಎಸ್‌ವೈ ಬುಲಾವ್!

ABOUT THE AUTHOR

...view details