ಬೆಂಗಳೂರು :ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಸವೇಶ್ವರನಗರ ಮತ್ತು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಮನೆ ಕಳವು, ದ್ವಿಚಕ್ರ ವಾಹನ, ಮೊಬೈಲ್ ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಸವೇಶ್ವರನಗರ ಠಾಣೆ ಪ್ರಕರಣ :ಮನೆ ಕಳವು ಮತ್ತು ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಮಂಜುನಾಥ್ (23) ಹಾಗೂ ಪ್ರಶಾಂತ್ (27) ಬಂಧಿತರು. ಆರೋಪಿಗಳಿಂದ 8 ಲಕ್ಷ ರೂ. ಮೌಲ್ಯದ 200 ಗ್ರಾಂ ಚಿನ್ನಾಭರಣಗಳು ವಶಕ್ಕೆ ಪಡೆಯಲಾಗಿದೆ.
ಇತ್ತೀಚೆಗೆ ಬಸವೇಶ್ವರನಗರ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ಚಿನ್ನದ ಸರ ಬಿಚ್ಚಿ ಮನೆಯ ಟೇಬಲ್ ಮೇಲೆ ಇಟ್ಟು ವಾಯವಿಹಾರಕ್ಕೆ ಹೋಗಿದ್ದರು. ಈ ವೇಳೆ ಮನೆಗೆ ನುಗ್ಗಿದ ಆರೋಪಿಗಳು ಚಿನ್ನದ ಸರ ಕಳವು ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧನದಿಂದ ಬಸೇವಶ್ವರನಗರ, ಅನುಗೊಂಡನಹಳ್ಳಿ, ಸರ್ಜಾಪುರ, ಕೆಂಬಾರ್ಲಾಹಳ್ಳಿ, ಶ್ರೀನಿವಾಸಪುರ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಪ್ರಕರಣ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.