ಕರ್ನಾಟಕ

karnataka

ETV Bharat / city

1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್: ಡಿಸಿಎಂ ಅಶ್ವತ್ಥನಾರಾಯಣ - ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಕೋವಿಡ್‌ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಈ ಟ್ಯಾಬ್ಲೆಟ್‌ ಪಿಸಿಗಳ ಮೂಲಕ ಎಲ್‌ಎಂಎಸ್‌ ವ್ಯವಸ್ಥೆಯಲ್ಲಿ ಕಲಿಕೆ ಮುಂದುವರಿಸಬಹುದು. ಈಗಾಗಲೇ ಕಲಿಕಾ ನಿರ್ವಹಣಾ ವ್ಯವಸ್ಥೆ ಅನುಷ್ಠಾನಕ್ಕೆ ಬಂದಿದೆ. ಅದರಂತೆ ವಿದ್ಯಾರ್ಥಿಗಳು ಸುಲಭ ವ್ಯಾಸಂಗಕ್ಕೆ ಈ ಟ್ಯಾಬ್ಲೆಟ್‌ಗಳು ಸಹಾಯಕ. ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇವು ಪೂರಕವಾಗಿವೆ ಎಂದು ಉನ್ನತ ಶಿಕ್ಷಣ ಸಚಿವರು ಹೇಳಿದ್ದಾರೆ.

free-tablet-distribution
ಉಚಿತ ಟ್ಯಾಬ್ಲೆಟ್

By

Published : Jun 22, 2021, 10:05 PM IST

ಬೆಂಗಳೂರು:ಉನ್ನತ ಶಿಕ್ಷಣ ಕಲಿಕೆಯಲ್ಲಿ ಇಡೀ ದೇಶದಲ್ಲೇ ಮೊದಲು ಎನ್ನುವ ಹೆಗ್ಗಳಿಕೆಗೆ ಹೊಂದಿರುವ ಕಲಿಕಾ ನಿರ್ವಹಣಾ ವ್ಯವಸ್ಥೆ (Learning Management System) ಬೋಧನೆ - ಕಲಿಕೆಗೆ ಅನುಕೂಲವಾಗುವಂತೆ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಮಾಡುವ ಮಹತ್ವದ ಕಾರ್ಯಕ್ಕೆ ನಾಳೆ ಚಾಲನೆ ಸಿಗಲಿದೆ.

ಓದಿ: ರಾಜ್ಯದಲ್ಲಿಂದು 3,709 ಮಂದಿಗೆ ಸೋಂಕು : ಕೊರೊನಾಗೆ 139 ಬಲಿ

ಕೋವಿಡ್‌ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್‌ ಅಂತರವೂ ಅಳಿಸಿಹಾಕುವ ಧ್ಯೇಯದೊಂದಿಗೆ ಸರ್ಕಾರ ಇಷ್ಟು ಬೃಹತ್‌ ಪ್ರಮಾಣದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.

ಇನ್ನು ಈ ಕಾರ್ಯಕ್ರಮಕ್ಕಾಗಿ ಉನ್ನತ ಶಿಕ್ಷಣ ಇಲಾಖೆಯ ಜತೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಕೈಜೋಡಿಸಿವೆ.‌ ನಾಳೆ ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆಯನ್ನ ಮಾಡಲಿದ್ದು, ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಶಾಸಕರು ಆಯಾ ಜಿಲ್ಲೆಗಳಲ್ಲಿ ವಿತರಣೆ ಮಾಡಲಿದ್ದಾರೆ.

ಅಂದ ಹಾಗೇ, ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗುತ್ತಿದೆ. ಈ ಯೋಜನೆಗಾಗಿ ರಾಜ್ಯ ಸರ್ಕಾರ 163 ಕೋಟಿ ರೂ. ವೆಚ್ಚ ಮಾಡಿದೆ.

ಇದರ ಜೊತೆಯಲ್ಲೇ ಸರ್ಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್‌ ಕ್ಲಾಸ್‌ ರೂಂಗಳಿಗೆ ಚಾಲನೆ ನೀಡಲಾಗುತ್ತಿದೆ. ಯಾವುದೇ ವಿದ್ಯಾರ್ಥಿ ಸಾಮಾಜಿಕ, ಆರ್ಥಿಕ ಅಥವಾ ಇನ್ನಾವುದೇ ಕಾರಣದಿಂದ ಕೋವಿಡ್‌ ಕಾಲದಲ್ಲಿ ಕಲಿಕೆಯಿಂದ ವಂಚಿತರಾಗಬಾರದು ಎನ್ನುವುದೇ ಟ್ಯಾಬ್ಲೆಟ್‌ ಪಿಸಿ ಯೋಜನೆಯ ಮುಖ್ಯ ಉದ್ದೇಶ.

ABOUT THE AUTHOR

...view details