ಕರ್ನಾಟಕ

karnataka

ETV Bharat / city

ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಕೆಎಸ್‌ಆರ್​​ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ - ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್​​ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಮಾ.28 ರಿಂದ ಏಪ್ರಿಲ್ 11ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.

Free travel facility for SSLC students in KSRTC buses
ಸಾಂದರ್ಭಿಕ ಚಿತ್ರ

By

Published : Mar 18, 2022, 6:18 PM IST

ಬೆಂಗಳೂರು: ಪ್ರತಿವರ್ಷ ಎಸ್ಎಸ್ಎಲ್​​ಸಿ ಪರೀಕ್ಷೆ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್​​ಆರ್​​ಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುತ್ತಿದೆ.

2021-22ನೇ ಸಾಲಿನ ಪರೀಕ್ಷೆಗಳು ಮಾ.28 ರಿಂದ ಏಪ್ರಿಲ್ 11ರವರೆಗೆ ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ರಾಜ್ಯದ ಎಲ್ಲಾ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಒದಗಿಸಲಾಗಿದೆ.

ಈ ಸಂಬಂಧ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ನಿಗಮದ ಎಲ್ಲಾ ಚಾಲಕ ನಿರ್ವಾಹಕರುಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ. ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್​​ ಕಾರ್ಯಾಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್​​ ಹತ್ತಲು/ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಇದನ್ನೂ ಓದಿ:ಮಾರ್ಚ್ 28 ರಿಂದ SSLC ಪರೀಕ್ಷೆ : ಅಂತಿಮ ವೇಳಾಪಟ್ಟಿ ಪ್ರಕಟ

ABOUT THE AUTHOR

...view details