ಬೆಂಗಳೂರು: ಮಹದೇವಪುರ ಕ್ಷೇತ್ರದ ಹಗದೂರು ವಾರ್ಡ್ನ ರಾಮಗೊಂಡನಹಳ್ಳಿಯ ಸರ್ಕಾರಿ ಶಾಲೆ ಮುಂಭಾಗದಲ್ಲಿ ಸಂಗ್ರಹಗೊಂಡಿರುವ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.
ರಾಮಗೊಂಡನಹಳ್ಳಿಯ ಸರ್ಕಾರಿ ಶಾಲೆ ಎದುರೇ ಕಸದ ರಾಶಿ... ಮಕ್ಕಳಿಗೆ ಸಾಂಕ್ರಾಮಿಕ ರೋಗ ಭೀತಿ - ಮಹದೇವಪುರ ಸುದ್ದಿ
ಮಹದೇವಪುರ ಕ್ಷೇತ್ರದ ಹಗದೂರು ವಾರ್ಡ್ನ ರಾಮಗೊಂಡನಹಳ್ಳಿಯ ಸರ್ಕಾರಿ ಶಾಲೆ ಮುಂಭಾಗದಲ್ಲಿ ಸಂಗ್ರಹಗೊಂಡಿರುವ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.
![ರಾಮಗೊಂಡನಹಳ್ಳಿಯ ಸರ್ಕಾರಿ ಶಾಲೆ ಎದುರೇ ಕಸದ ರಾಶಿ... ಮಕ್ಕಳಿಗೆ ಸಾಂಕ್ರಾಮಿಕ ರೋಗ ಭೀತಿ](https://etvbharatimages.akamaized.net/etvbharat/prod-images/768-512-4778036-thumbnail-3x2-sow.jpg)
ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಶೇಖರಣೆಯಾಗಿರುವ ಕಸದಿಂದ ದುರ್ವಾಸನೆ ಬೀರುತ್ತಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾಗುತ್ತಿದೆ. ಕಸ ಸುರಿಯಲು ಬಂದವರಿಗೆ ತಿಳಿ ಹೇಳಿದರೂ ಸಹ ಮೊಂಡುತನ ತೋರುತ್ತಾರೆ. ಹಗಲು ಹೊತ್ತಿನಲ್ಲೇ ಕಾಯುವ ಪರಿಸ್ಥಿತಿಯಿದ್ದು, ಯಾವುದೇ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ರಾತ್ರಿ ವೇಳೆ ವಾಹನದಲ್ಲಿ ಬಂದು ಕಸ ಸುರಿದು ಹೋಗುತ್ತಿದ್ದಾರೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಹಗದೂರು ವಾರ್ಡ್ ವ್ಯಾಪ್ತಿಯ ವಿಜಯನಗರ ವೈಟ್‌ಫೀಲ್ಡ್ ಗಾಂಧಿಪುರ, ಇಮ್ಮಡಿಹಳ್ಳಿ, ನಾಗೊಂಡನಹಳ್ಳಿ, ನಲ್ಲೂರಹಳ್ಳಿ, ಸಿದ್ದಾಪುರದಲ್ಲಿ ಪ್ರತಿದಿನ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳು ಕೂಡ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.