ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಈಗಾಗಲೇ ಬಂಧಿಸಿರುವ ಎಲ್ಲ ಆರೋಪಿಗಳನ್ನ ಬೇರೆ ಬೇರೆ ಕಾರಾಗೃಹಗಳಿಗೆ ಶಿಫ್ಟ್ ಮಾಡಲು ರಾಜ್ಯ ಕಾರಾಗೃಹ ಎಡಿಜಿಪಿ ನಿರ್ಧಾರ ಮಾಡಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿವಿಧ ಕಾರಾಗೃಹಗಳಿಗೆ ಆರೋಪಿಗಳ ಶಿಫ್ಟ್ಗೆ ನಿರ್ಧಾರ..!? - ಎಡಿಜಿಪಿ
ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಈಗಾಗಲೇ ಬಂಧಿಸಿರುವ ಎಲ್ಲ ಆರೋಪಿಗಳನ್ನ ಬೇರೆ ಬೇರೆ ಕಾರಾಗೃಹಕ್ಕೆ ಶಿಫ್ಟ್ ಮಾಡಲು ರಾಜ್ಯ ಕಾರಾಗೃಹ ಎಡಿಜಿಪಿ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಗಳೆಲ್ಲ ಒಂದೇ ಕಡೆ ಇದ್ದರೆ ಸಾಕ್ಷಿ ನಾಶ ಮಾಡುವ ಸಾಧ್ಯತೆ ದಟ್ಟವಾಗಿದ್ದು, ಹೀಗಾಗಿ ಹತ್ಯೆಯ ಮಾಸ್ಟರ್ ಮೈಂಡ್ ಅಮೋಲ್ ಕಾಳೆ ಮೈಸೂರು ಕಾರಾಗೃಹಕ್ಕೆ, ಶೂಟರ್ ಪರಶುರಾಮ್ ವಾಗ್ಮೊರೆ ತುಮಕೂರು ಜೈಲು, ಮನೋಹರ್ ಯಾವಡೆಯನ್ನ ಶಿವಮೊಗ್ಗ ಸೆಂಟ್ರಲ್ ಜೈಲಿಗೆ, ಅಮೀತ್ ದೀಗ್ವೇಕರ್ ನನ್ನ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಕೇಸ್ ವಿಚಾರಣೆ ವೇಳೆ ಕೋರ್ಟ್‌ಗೆ ದಿಕ್ಕು ತಪ್ಪಿಸುವ ಸಾಧ್ಯತೆ ಇದೆ ಎಂಬ ಕಾರಣದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಇದೇ ಕಾರಣದಿಂದ ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಆಡಳಿತಾತ್ಮಕ ಕಾರಣ ಕೊಟ್ಟು ವರ್ಗಾವಣೆ ಮಾಡಲಿದ್ದಾರೆ. ಒಂದು ವೇಳೆ ಆರೋಪಿಗಳ ವಿಚಾರಣೆ ಅಗತ್ಯವಿದ್ದರೆ ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.