ಬೆಂಗಳೂರು:ರಾಜ್ಯದಲ್ಲಿ ಮಳೆ ಸಮಸ್ಯೆ ಆರಂಭವಾಗಿದ್ದು, ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಕೊರೊನಾ ವಿಚಾರದಲ್ಲಿ ಮಾಡಿಕೊಂಡ ನಿರ್ಲಕ್ಷ್ಯ ಈ ಕಾರ್ಯದಲ್ಲಿ ಆಗದಿರಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಮಳೆ ಸಂಕಷ್ಟಕ್ಕೆ ಈಗಲೇ ಎಚ್ಚೆತ್ತುಕೊಳ್ಳಿ, ಕೊರೊನಾ ಮಾದರಿ ನಿರ್ಲಕ್ಷ್ಯ ಬೇಡ: ಖಂಡ್ರೆ - ಈಶ್ವರ್ ಖಂಡ್ರೆ ಟ್ವೀಟ್
ಕೊರೊನಾ ಸಂಕಷ್ಟದ ನಡುವೆ ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗುತ್ತಿದೆ. ಸರ್ಕಾರ ಮಳೆ ಹಾನಿ ಸಂಭವಿಸಿದ ಬಳಿಕ ಕ್ರಮ ಕೈಗೊಳ್ಳುವ ಬದಲು ಈಗಲೇ ಎಚ್ಚೆತ್ತುಕೊಳ್ಳಬೇಕು. ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಕೃಷ್ಣಾ ನದಿಯ ಪ್ರವಾಹ ಕಾರಣ ಕೆಲ ಗ್ರಾಮಗಳು ಜಲಾವೃತವಾಗುವ ಆತಂಕವಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಕೂಡಲೇ ಗ್ರಾಮಸ್ಥರನ್ನು ಸ್ಥಳಾಂತರ ಮಾಡಲಿ ಎಂದು ಈಶ್ವರ್ ಖಂಡ್ರೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಟ್ವೀಟ್ ಮೂಲಕ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವ ಅವರು, ಕೊರೊನಾ ಸಂಕಷ್ಟದ ನಡುವೆ ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗುತ್ತಿದೆ. ಸರ್ಕಾರ ಮಳೆ ಹಾನಿ ಸಂಭವಿಸಿದ ಬಳಿಕ ಕ್ರಮ ಕೈಗೊಳ್ಳುವ ಬದಲು ಈಗಲೇ ಎಚ್ಚೆತ್ತುಕೊಳ್ಳಬೇಕು. ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಕೃಷ್ಣಾ ನದಿಯ ಪ್ರವಾಹ ಕಾರಣ ಕೆಲ ಗ್ರಾಮಗಳು ಜಲಾವೃತವಾಗುವ ಆತಂಕವಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಕೂಡಲೇ ಗ್ರಾಮಸ್ಥರನ್ನು ಸ್ಥಳಾಂತರ ಮಾಡಲಿ. ಮಳೆ ಎದುರಿಸಲು ಸನ್ನದ್ಧ ಪಡೆಯನ್ನು ಕೂಡಲೇ ರಚಿಸಿ, ವಿಪತ್ತು ನಿರ್ವಹಣಾ ತಂಡವನ್ನು ಮಳೆ ಪೀಡಿತ ಪ್ರದೇಶಗಳಿಗೆ ರವಾನಿಸಲು ಸೂಚನೆ ನೀಡುವಂತೆ ಆಗ್ರಹಿಸುತ್ತೇನೆ ಎಂದಿದ್ದಾರೆ.
ಕಳೆದ ವರ್ಷ ಮಳೆಯಿಂದಾಗಿ ಉಂಟಾದ ಹಾನಿಗೆ ಪರಿಹಾರ ಕಾರ್ಯ ಸಮರ್ಪಕವಾಗಿ ಕಲ್ಪಿಸುವಲ್ಲಿ ಸರ್ಕಾರ ಎಡವಿದೆ ಎಂದು ಈಗಲೂ ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸುತ್ತಿದೆ. ಇದೀಗ ಕೊರೊನಾ ವಿಚಾರದಲ್ಲಿ ಸರ್ಕಾರ ಸಮರ್ಥ ಕಾರ್ಯನಿರ್ವಹಣೆ ತೋರಿಸುವಲ್ಲಿ ವಿಫಲವಾಗಿದೆ ಎಂದು ದೂರಿದೆ. ಈ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸರ್ಕಾರಕ್ಕೆ ಮುನ್ನೆಚ್ಚರಿಕೆ ನೀಡುವ ಕಾರ್ಯ ಮಾಡಿದ್ದಾರೆ.