ದೊಡ್ಡಬಳ್ಳಾಪುರ: ಶ್ರಾವಣ ಮಾಸದಲ್ಲಿ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದ ಹಿನ್ನೆಲೆ, ಕಳೆದ ತಿಂಗಳಿಗಿಂತ ಈ ಬಾರಿ ಭಕ್ತರ ಹುಂಡಿ ಹಣ ದುಪ್ಪಟ್ಟು ಪ್ರಮಾಣದಲ್ಲಿ ಸಂಗ್ರಹವಾಗಿದೆ. ಒಟ್ಟು 60,08,007 ರೂಪಾಯಿ ನಗದು ಸಂಗ್ರಹಣೆ ಆಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಿನ್ನೆ ಭಕ್ತರ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಸಲಾಯ್ತು. ಮುಜರಾಯಿ ತಹಶೀಲ್ದಾರ್ ಜಿ.ಜೆ. ಹೇಮಾವತಿ, ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಕೃಷ್ಣಪ್ಪ ಅವರ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ಮಾಡಲಾಗಿದೆ.