ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಶೌರ್ಯ ಪುರಸ್ಕಾರ, ವಿಶೇಷ ನಗದು ಬಹುಮಾನ ನೀಡಿ ಎಂದು ಶಾಸಕ ಆರ್.ವಿ. ದೇಶಪಾಂಡೆ ಮನವಿ ಮಾಡಿದ್ದಾರೆ.
ಕೊರೊನಾ ವಾರಿಯರ್ಸ್ಗೆ ಶೌರ್ಯ ಪುರಸ್ಕಾರ, ವಿಶೇಷ ನಗದು ಬಹುಮಾನ ನೀಡಿ: ದೇಶಪಾಂಡೆ - ಕೊರೊನಾ ವಾರಿಯರ್ಸ್ಗೆ ಶೌರ್ಯ ಪುರಸ್ಕಾರ ನೀಡುವಂತೆ ಮನವಿ
ಕೊರೊನಾ ವಿರುದ್ಧ ಹೋರಾಡುತ್ತಿರುವ ಸಿಬ್ಬಂದಿಗೆ ಶೌರ್ಯ ಪುರಸ್ಕಾರ ಮತ್ತು ವಿಶೇಷ ನಗದು ಬಹುಮಾನ ನೀಡಬೇಕು ಎಂದು ಒತ್ತಾಯಿಸಿ ಶಾಸಕ ಆರ್.ವಿ. ದೇಶಪಾಂಡೆ ಅವರು ಸಿಎಂಗೆ ಪತ್ರ ಬರೆದಿದ್ದಾರೆ.

ಶಾಸಕ ಆರ್.ವಿ.ದೇಶಪಾಂಡೆ
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ವೈದ್ಯರು, ದಾದಿಯರು ಪ್ಯಾರಾಮೆಡಿಕಲ್ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ಅಂಚೆ ಇಲಾಖೆ ಸೇರಿದಂತೆ ಹಲವು ಇಲಾಖೆಯವರು ತಮ್ಮ ಪ್ರಾಣವನ್ನು ಲೆಕ್ಕಿಸದೇ ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಕುಟುಂಬಕ್ಕೆ ದೂರವಾಗಿ ರೋಗಿಗಳಿಗೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ವಿಶೇಷ ಸವಲತ್ತು ನೀಡಬೇಕು. ಶೌರ್ಯ ಪ್ರಶಸ್ತಿ ಹಾಗೂ ವಿಶೇಷ ನಗದು ಪುರಸ್ಕಾರ ನೀಡಬೇಕು ಎಂದು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.