ಕರ್ನಾಟಕ

karnataka

ETV Bharat / city

ದೇವಾಲಯಗಳ ಆಸ್ತಿ ಸಂರಕ್ಷಿಸಲು ಪ್ರಥಮಾದ್ಯತೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ - ಸಚಿವ ಕೋಟ ಶ್ರೀನಿವಾಸ ಪೂಜಾರಿ

ಎಲ್ಲಾ ಮುಜರಾಯಿ ದೇವಾಲಯಗಳ ಆಸ್ತಿ ಸಂರಕ್ಷಿಸುವುದು ನಮ್ಮ ಜವಾಬ್ದಾರಿ. ಒತ್ತುವರಿ ಆಗಿರುವ ದೇವಾಲಯಗಳ ಜಾಗವನ್ನು ತೆರವುಗೊಳಿಸಿ, ಸ್ಥಳೀಯವಾಗಿ ಯಾವುದೇ ಅಡೆತಡೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

kota Srinivasa Poojary
ಶ್ರೀನಿವಾಸ ಪೂಜಾರಿ

By

Published : Jul 1, 2021, 3:29 PM IST

ಬೆಂಗಳೂರು: ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮುಜರಾಯಿ ದೇವಾಲಯಗಳ ಆಸ್ತಿಯನ್ನು ಯಾವುದೇ ಲೋಪಗಳಿಗೆ ಎಡೆಮಾಡಿಕೊಡದಂತೆ ಸಂರಕ್ಷಿಸುವುದು ಕಾರ್ಯನಿರ್ವಹಣಾ ಅಧಿಕಾರಿಗಳ ಜವಾಬ್ದಾರಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮರಾಯ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇವಾಲಯಗಳ ಸರ್ವೇ ಕಾರ್ಯ ಕೈಗೊಂಡು, ಗಡಿ ಗುರುತಿಸಿ, ಬೇಲಿ ಹಾಕಿ ರಕ್ಷಿಸಲು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಒತ್ತುವರಿ ಆಗಿರುವ ಹಲವಾರು ದೇವಾಲಯಗಳ ಜಾಗವನ್ನು ತೆರವುಗೊಳಿಸಿ, ಸ್ಥಳೀಯವಾಗಿ ಯಾವುದೇ ಅಡೆತಡೆಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಕಾರ್ಯದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಯ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಪಿ.ಆರ್. ರಮೇಶ್, ರಮೇಶ್ ಗೌಡ, ರವಿಕುಮಾರ್ ಹಾಗೂ ಅ. ದೇವೇಗೌಡ , ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್, ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details