ಕರ್ನಾಟಕ

karnataka

ETV Bharat / city

ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ: ಹೆಚ್ ಡಿಕೆ - Going for a divide using language is dangerous for the country: HDK

ಇಂದು ಹಿಂದೂತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

going-for-a-divide-using-language-is-dangerous-for-the-country-hdk
ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ : ಹೆಚ್ ಡಿಕೆ ಆತಂಕ

By

Published : Apr 9, 2022, 1:21 PM IST

ಬೆಂಗಳೂರು : ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರತಿಯೊಂದಕ್ಕೂ ಹಿಂದೂತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ ಎಂದು ಹೇಳಿದ್ದಾರೆ.

ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟಿಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ ಎಂದು ಹೇಳಿದ್ದಾರೆ.

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ಧ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂದು ಇದೇ ವೇಳೆ ಹೇಳಿದ್ದಾರೆ.

ಓದಿ :ಇನ್ನುಂದೆ ಮನೆ ಬಾಗಿಲಿಗೇ ಸ್ಪೀಡ್​ ಪೋಸ್ಟ್​ನಲ್ಲಿ ಬರಲಿದೆ ಜನನ ಪ್ರಮಾಣಪತ್ರ..

ABOUT THE AUTHOR

...view details