ದೇವನಹಳ್ಳಿ: ಚಾಕೊಲೇಟ್ ಒಳಗೆ ಮರೆಮಾಚಿ ಚಿನ್ನವನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನ್ನ ಬಂಧಿಸಿರುವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಆತನಿಂದ 9,10,805 ರೂಪಾಯಿ ಮೌಲ್ಯದ 176.24 ಗ್ರಾಂ ಬಂಗಾರ ವಶಕ್ಕೆ ಪಡೆದಿದ್ದಾರೆ.
ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಣೆ.. ಸಿಕ್ಕಿ ಬಿದ್ದ ಪ್ರಯಾಣಿಕ - ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಣಿಕೆ
ಗುದನಾಳದಲ್ಲಿ ಬರೋಬ್ಬರಿ 9 ಲಕ್ಷ ರೂ. ಮೌಲ್ಯದ 176 ಗ್ರಾಂ ಪೇಸ್ಟ್ ರೂಪದ ಚಿನ್ನ ಕಳ್ಳಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
Gold
ಪ್ರಯಾಣಿಕರ ಪ್ರೊಫೈಲ್ ಪರಿಶೀಲನೆ ಮಾಡುತ್ತಿದ್ದಾಗ ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಮೇಲೆ ಸಂಶಯ ವ್ಯಕ್ತವಾಗಿತ್ತು. ಏರ್ಪೋರ್ಟ್ಗೆ ಬಂದ ನಂತರ ಆತನನ್ನ ತಪಾಸಣೆ ನಡೆಸಿದಾಗ ಪೇಸ್ಟ್ ರೂಪದ ಚಿನ್ನವನ್ನ ತನ್ನ ಗುದನಾಳದಲ್ಲಿ ಹಾಗೂ ಚಾಕೊಲೇಟ್ ಒಳಗೆ ಚಿನ್ನದ ತುಣುಕನ್ನ ಮರೆಮಾಚಿ ಅಕ್ರಮವಾಗಿ ಸಾಗಾಣಿಕೆ ಮಾಡಲು ಯತ್ನಿಸುತ್ತಿದ್ದ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕಿರಾಣಿ ಅಂಗಡಿಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್ ಮಾರುತ್ತಿದ್ದ ಖದೀಮ ಅರೆಸ್ಟ್