ಕರ್ನಾಟಕ

karnataka

ETV Bharat / city

ಸಹಕಾರ ಸಂಸ್ಥೆಗಳಿಂದ ಸಾಲ ಪಡೆದ ರೈತರಿಗೆ ಗುಡ್ ನ್ಯೂಸ್: ಬಡ್ಡಿ ಮನ್ನಾ ಮಾಡಿ ಸರ್ಕಾರ ಆದೇಶ - Good news for Farmer's from state government

ಸಹಕಾರ ಸಂಸ್ಥೆಗಳಿಂದ ಸಾಲ ಪಡೆದ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸುಸ್ತಿ ಸಾಲ ಮರುಪಾವತಿ ಮಾಡಿದರೆ, ಅದರ‌ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.

state government
ಸಹಕಾರ ಸಂಸ್ಥೆಗಳಿಂದ ಸಾಲ ಪಡೆದ ರೈತರಿಗೆ ಗುಡ್ ನ್ಯೂಸ್

By

Published : Feb 15, 2020, 10:05 PM IST

ಬೆಂಗಳೂರು:ಸಹಕಾರ ಸಂಸ್ಥೆಗಳಿಂದ ಸಾಲ ಪಡೆದ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸುಸ್ತಿ ಸಾಲ ಮರುಪಾವತಿ ಮಾಡಿದರೆ, ಅದರ‌ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಸಹಕಾರ ಸಂಸ್ಥೆಗಳ ಮೂಲಕ ಸಾಲ‌ ಪಡೆದು, ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿದೆ.

ಆದೇಶದ ಪ್ರಕಾರ, ರಾಜ್ಯದ ಸಹಕಾರ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕ್​ಗಳಿಂದ ಸಾಲ ಪಡೆದು ಜನವರಿ 30, 2020ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಅಸಲನ್ನು ಮಾರ್ಚ್‌ 31, 2020ಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ.

ಬಡ್ಡಿ ಮನ್ನಾದ ಷರತ್ತುಗಳೇನು?

  • ಜನವರಿ 30, 2020ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳಿಗೆ ಮಾತ್ರ ಬಡ್ಡಿ ಮನ್ನಾ ಅನ್ವಯವಾಗುತ್ತದೆ.
  • ರಾಷ್ಟ್ರೀಕೃತ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಸೇರಿ ಇತರ ಯಾವುದೇ ವಿತ್ತೀಯ ಸಂಸ್ಥೆಗಳಿಂದ ಪಡೆದ ಸಾಲಗಳಿಗೆ ಅನ್ವಯವಾಗುವುದಿಲ್ಲ.
  • ಕೃಷಿಯೇತರ ಹಾಗೂ ಸ್ವಸಹಾಯ ಸಂಘಗಳು ಪಡೆದ ಸಾಲಗಳಿಗೆ ಬಡ್ಡಿ ಮನ್ನಾ ಯೋಜನೆ ಅನ್ವಯವಾಗುವುದಿಲ್ಲ.
  • ರೈತರು ಮರುಪಾವತಿಸುವ ಸುಸ್ತಿ ಸಾಲದ ಅಸಲು ದಿನಾಂಕ ಏಪ್ರಿಲ್ 1, 2004ಕ್ಕಿಂತ ಹಿಂದಿನ ಅವಧಿಯ ಸಾಲವಾಗಿದ್ದರೆ, ಸಾಲ‌ ಮರುಪಾವತಿ ದಿನಾಂಕದವರೆಗೆ ಸಾಲಗಳಿಗೆ ನಿಗದಿ ಮಾಡಿರುವ ಬಡ್ಡಿ ದರ ಅಥವಾ ಶೇ.12 ಬಡ್ಡಿದರ ಇದರಲ್ಲಿ ಯಾವುದು ಕಡಿಮೆಯೋ ಅಂಥ ಬಡ್ಡಿ ಆಧಾರದಲ್ಲಿ ಸಹಕಾರ ಸಂಘಗಳಿಗೆ ಸರ್ಕಾರ ಬಡ್ಡಿ ಸಹಾಯಧನವನ್ನು ಭರಿಸಲಿದೆ.

ABOUT THE AUTHOR

...view details