ಬೆಂಗಳೂರು:ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಅವರು ಯಶವಂತಪುರದ ಎಪಿಎಂಸಿ ಯಾರ್ಡ್ ಗೇಟ್ ನಂ.1ರಲ್ಲಿ ಸ್ಥಾಪಿಸಿರುವ ಸೋಂಕು ನಿವಾರಕ ಸುರಂಗವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ನಾನಾ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ರೈತರು,ಲಾರಿ ಚಾಲಕರು, ಕ್ಲೀನರ್‌ಗಳು ಮತ್ತು ಎಪಿಎಂಸಿ ಯಾರ್ಡ್‌ನಲ್ಲಿ ಕಾರ್ಯ ನಿರ್ವಹಿಸುವ ವರ್ತಕರು ಓಡಾಡುತ್ತಿರುತ್ತಾರೆ. ಹಾಗಾಗಿ ಇಲ್ಲಿ ಕೊರೊನಾ ವೈರಸ್ ಹರಡುವ ಸಾದ್ಯತೆ ಹೆಚ್ಚಾಗಿದ್ದು, ಅದನ್ನು ತಡೆಯಲು ಸೋಂಕು ನಿವಾರಕ ಸುರಂಗ ಸ್ಥಾಪಿಸಲಾಗಿದೆ. ಸದಾಸ್ಮಿತ ಫೌಂಡೇಷನ್ ವತಿಯಿಂದ ಕೇಂದ್ರ ಸಚಿವ ಸದಾನಂದಗೌಡ ಹಾಗೂ ಸದಾಸ್ಮಿತ ಫೌಂಡೇಷನ್ ಅಧ್ಯಕ್ಷರು, ಪದಾಧಿಕಾರಿಗಳು ಸೋಂಕು ನಿವಾರಕ ಸುರಂಗ ಸ್ಥಾಪಿಸಿದ್ದಾರೆ. ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.