ಬೆಂಗಳೂರು:ಬೆಂಗಳೂರು ಲಾಕ್‌ಡೌನ್ ಸಂಬಂಧ ಸರ್ಕಾರ ವಿಸ್ತೃತ ಮಾರ್ಗಸೂಚಿಯನ್ನು ಹೊರಡಿಸಿದೆ.
ಬೆಂಗಳೂರು ಲಾಕ್‌ಡೌನ್ ಸಂಬಂಧ ವಿಸ್ತೃತ ಮಾರ್ಗಸೂಚಿ ಹೊರಡಿಸಿದ ಸರ್ಕಾರ..! ಬಿಬಿಎಂಪಿ ಪ್ರದೇಶ, ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಳಗೊಂಡಿರುವ ಬೆಂಗಳೂರು ಪ್ರದೇಶದಲ್ಲಿ ಜುಲೈ 14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 22ರ ಮುಂಜಾನೆ 5 ಗಂಟೆಯವರೆಗೆ 7 ದಿನಗಳ ಅವಧಿಯ ಲಾಕ್‌ಡೌನ್ ಆದೇಶಿಸಲಾಗಿದೆ.
ಬೆಂಗಳೂರು ಲಾಕ್‌ಡೌನ್ ಸಂಬಂಧ ವಿಸ್ತೃತ ಮಾರ್ಗಸೂಚಿ ಹೊರಡಿಸಿದ ಸರ್ಕಾರ..! ಈ ಆದೇಶದಲ್ಲಿ ನೀಡಲಾಗಿರುವ ಲಾಕ್‌ಡೌನ್‌ನ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶಿಸಲಾಗಿದೆ.
ಬೆಂಗಳೂರು ಲಾಕ್‌ಡೌನ್ ಸಂಬಂಧ ವಿಸ್ತೃತ ಮಾರ್ಗಸೂಚಿ ಹೊರಡಿಸಿದ ಸರ್ಕಾರ..! ಬೆಂಗಳೂರು ಲಾಕ್‌ಡೌನ್ ವೇಳೆ ಏನೆಲ್ಲಾ ಇರೋದಿಲ್ಲ:
ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮ ಮಂಡಳಿ, ಮೆಟ್ರೋ ರೈಲು ಸೇವೆ, ಟ್ಯಾಕ್ಸಿಗಳು, ಆಟೋ ಮತ್ತು ಕ್ಯಾಬ್, ಶಾಲೆಗಳು, ಕಾಲೇಜುಗಳು, ಶಿಕ್ಷಣ/ತರಬೇತಿ/ಕೋಚಿಂಗ್ ಕೇಂದ್ರಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರೆ ಆತಿಥ್ಯ ಸೇವೆಗಳನ್ನು ನಿರ್ಬಂಧಿಸಲಾಗಿದೆ.
ಬೆಂಗಳೂರು ಲಾಕ್‌ಡೌನ್ ಸಂಬಂಧ ವಿಸ್ತೃತ ಮಾರ್ಗಸೂಚಿ ಹೊರಡಿಸಿದ ಸರ್ಕಾರ..! ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು ಆಹಾರ ತಯಾರಿಕೆಗೆ, ಸರಬರಾಜು ಉದ್ದೇಶಕ್ಕಾಗಿ ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ.
ಎಲ್ಲಾ ಚಿತ್ರಮಂದಿರ, ಶಾಪಿಂಗ್ ಮಾಲ್, ಕ್ರೀಡಾ ಸಂಕೀರ್ಣ, ಜಿಮ್, ಈಜುಕೊಳ, ಮನರಂಜನಾ ಉದ್ಯಾನವನಗಳು, ರಂಗ ಮಂದಿರಗಳು, ಬಾರ್‌ಗಳು, ಆಡಿಟೋರಿಯಂಗಳು, ಸಭಾ ಭವನಗಳು ಎಲ್ಲಾ ರೀತಿಯ ಸಭೆ-ಸಮಾರಂಭ, ಪೂಜಾ ಸ್ಥಳ, ಧಾರ್ಮಿಕ ಸಭೆಗಳಿಗೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಖಾಸಗಿ ಬಸ್‌ಗಳು ಮತ್ತು ಖಾಸಗಿ ವಾಹನಗಳ ಓಡಾಟ ಇರಲಿದೆ.
ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿರುವ ಕಚೇರಿಗಳು ಶೇ. 50 ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಣೆ ಮಾಡಲಿವೆ.
ಬೆಂಗಳೂರು ಲಾಕ್‌ಡೌನ್ ಸಂಬಂಧ ವಿಸ್ತೃತ ಮಾರ್ಗಸೂಚಿ ಹೊರಡಿಸಿದ ಸರ್ಕಾರ..! ನ್ಯಾಯಾಲಯಗಳು ಹಾಗೂ ನ್ಯಾಯಾಂಗ ಕೆಲಸಗಳಿಗೆ ಸಂಬಂಧಿಸಿದ ಕಚೇರಿಗಳು ಉಚ್ಚ ನ್ಯಾಯಾಲಯ ಹೊರಡಿಸಿರುವ ಮಾರ್ಗಸೂಚಿಗಳ ಅನ್ವಯ ಕಾರ್ಯ ನಿರ್ವಹಿಸಲಿವೆ.