ಕರ್ನಾಟಕ

karnataka

ETV Bharat / city

ಎಚ್ಚರಿಕೆ... ಸರ್ಕಾರಿ ಸಿಬ್ಬಂದಿ ಇನ್ಮುಂದೆ ಸರಿಯಾದ ಸಮಯಕ್ಕೆ ಹಾಜರಿರಬೇಕು...! - ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ

ಸಾರ್ವಜನಿಕರು ದೂರದ ಸ್ಥಳಗಳಿಂದ ಸರ್ಕಾರಿ ಕಚೇರಿಯಲ್ಲಿ ತಮ್ಮ ಕಾರ್ಯಗಳಿಗಾಗಿ ಆಗಮಿಸಿದಾಗ ಕಚೇರಿಯಲ್ಲಿ ಸಿಬ್ಬಂದಿ ಇಲ್ಲದೇ ಇರುವ ಸಮಸ್ಯೆ ಹೆಚ್ಚಾಗಿದ್ದರಿಂದ, ನಿಗದಿತ ಅವಧಿಗೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಚೇರಿಯಲ್ಲಿ ಅಧಿಖಾರಿಗಳು ಇರಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚನೆ ಹೊರಡಿಸಿದ್ದಾರೆ.

government-order
ಮುಖ್ಯ ಕಾರ್ಯದರ್ಶಿಯಿಂದ ಆದೇಶ

By

Published : Jul 25, 2022, 7:43 PM IST

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಕಚೇರಿಗಳಲ್ಲಿ ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಾರ್ಯನಿಷ್ಠೆಯನ್ನು ತೋರಲು ಈಗಾಗಲೇ ಸರ್ಕಾರವು ಸಾಕಷ್ಟು ಸುತ್ತೋಲೆಗಳಲ್ಲಿ ಸೂಚನೆಗಳನ್ನು ನೀಡಿದ್ದರೂ, ಸರ್ಕಾರಿ ನೌಕರರು/ಅಧಿಕಾರಿಗಳಲ್ಲಿ ಸಮಯ ಪ್ರಜ್ಞೆ ಮತ್ತು ಕಾರ್ಯನಿಷ್ಠೆಯ ಕೊರತೆಯನ್ನು ಇತ್ತೀಚಿನ ದಿನಗಳಲ್ಲಿ ಅವಲೋಕಿಸಲಾಗಿದೆ.

ಆದೇಶ ಪತ್ರ

ಸಾರ್ವಜನಿಕರು ದೂರದ ಸ್ಥಳಗಳಿಂದ ಸರ್ಕಾರಿ ಕಚೇರಿಯಲ್ಲಿ ತಮ್ಮ ಕಾರ್ಯಗಳಿಗೆ ಬೆಳಗ್ಗೆ ನಿಗದಿತ ಅವಧಿಯಲ್ಲಿ ಸರ್ಕಾರದ ಕಚೇರಿಗಳಿಗೆ ಭೇಟಿ ನೀಡಿದಾಗ ಬಹುತೇಕ ಕಚೇರಿಗಳಲ್ಲಿ ಸಿಬ್ಬಂದಿ ಕಚೇರಿಗೆ ಹಾಜರಾಗಿಲ್ಲದೇ ಇರುವ ಕಾರಣ ಸಾಮಾನ್ಯ ಜನರು ಬವಣೆ ಪಡುವಂತಾಗಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರದ ಕಚೇರಿಯ ಪ್ರಾರಂಭದ ಸಮಯ ಬೆಳಗ್ಗೆ 10 ಗಂಟೆಗೆ ಕಡ್ಡಾಯವಾಗಿ ಹಾಜರಾಗಬೇಕು ಹಾಗೂ ಕಚೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಚೇರಿ ಅವಧಿಯಲ್ಲಿ ನೌಕರರು/ಅಧಿಕಾರಿಗಳು ಅನ್ಯ ಕರ್ತವ್ಯದ ಮೇರೆಗೆ ತೆರಳಬೇಕಾಗಿದ್ದಲ್ಲಿ ಸಕಾರಣವನ್ನು ನಮೂದಿಸಿ, ಮೇಲಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು. ನಿಗದಿತ ಕಾಲಾವಧಿಗಿಂತ ವಿಳಂಬವಾಗಿ ಹಾಜರಾಗುವ ಹಾಗೂ ಕಚೇರಿ ಅವಧಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದಲ್ಲಿ ನಮೂದಿಸಿ, ಮೇಲಧಿಕಾರಿಗಳ ಅನುಮತಿ ಪಡೆದಿಲ್ಲದ ನೌಕರರು, ಅಧಿಕಾರಿಗಳ ವಿರುದ್ಧ ಸಕ್ಷಮ ಪ್ರಾಧಿಕಾರವು ಸೂಕ್ತ ಶಿಸ್ತು ಕ್ರಮ ಜರುಗಿಸತಕ್ಕದ್ದು ಎಂದು ಮುಖ್ಯ ಕಾರ್ಯದರ್ಶಿ ಅವರು ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ :ಆಸ್ತಿ ನೋಂದಣಿ ಪ್ರಕ್ರಿಯೆ.. ರಾಜ್ಯದ ಜನತೆಗೆ ಮತ್ತೆ ಸಿಹಿ ಸುದ್ದಿ ನೀಡಿದ ಸರ್ಕಾರ

ABOUT THE AUTHOR

...view details